ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು ರಾತ್ರಿ ವಿಷ ಸೇವಿಸಿದ್ದಾರೆ. ತಕ್ಷಣವೇ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ, ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿ, ನವೆಂಬರ್ 4ರ ಬುಧವಾರ ಮಂಡ್ಯ ಡಿಸಿ ಕಚೇರಿ ಎದುರು ರೈತ ಮಂಜೇಗೌಡ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ರು. ಮರುದಿನ ಗುರುವಾರ ಚಿಕಿತ್ಸೆ ಫಲಕಾರಿಯಾಗಿದೇ ಸಾವನ್ನಪ್ಪಿದ್ರು. ಒಟ್ನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗ್ತಿದ್ದು, ಸರ್ಕಾರ ರೈತರ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಳ್ಳಬೇಕಿದೆ.

