Wednesday, April 23, 2025

Latest Posts

Hassan : ಪತ್ನಿ ಕಿರುಕುಳಕ್ಕೆ ಬೇಸತ್ತ ಗಂಡನ ಆ*ತ್ಮಹ*ತ್ಯೆ !

- Advertisement -

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ ಕಾಟದಿಂದ ಬೇಸತ್ತು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ್ ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋಗಿದ್ದರು. ಆ ಬಳಿಕ ನಾಪತ್ತೆಯಾಗಿದ್ದರು. ಗೊರೂರು ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮೋದ್ ಶವ ನೋಡಲು ಪತ್ನಿಯೂ ಬಂದಿದ್ದು, ಇದೇ ವೇಳೆ ಹೈಡ್ರಾಮಾ ನಡೆದಿದೆ. ತಾಯಿ ಹಾಗೂ ಮಗು ಜೊತೆ ಪತಿ ಶವ ನೋಡಲು ಪತ್ನಿ ಬಂದಿದ್ದಾರೆ. ಈ ವೇಳೆ ಪತ್ನಿ ಕುಟುಂಬ ಸದಸ್ಯರು ಹಾಗೂ ಪ್ರಮೋದ್ ಕುಟುಂಬ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಪತ್ನಿಯನ್ನು ಪ್ರಮೋದ್ ಕುಟುಂಬ ಸದಸ್ಯರು ಬೆನ್ನಟ್ಟಿದ್ದಾರೆ. ನಂತರ ಪತ್ನಿ ಹಾಗೂ ಆಕೆಯ ತಾಯಿಯನ್ನು ಪೊಲೀಸರು ರಕ್ಷಿಸಿ ಕರೆದೊಯ್ದರು. ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತಾಯಿತು.ಪತ್ನಿ ಕಾಟಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಅದರ ಬೆನ್ನಲ್ಲೇ ಕರ್ನಾಟಕದ ವಿವಿಧೆಡೆ ಅಂಥ ಮತ್ತಷ್ಟು ಪ್ರಕರಣಗಳು ವರದಿಯಾಗುತ್ತಿವೆ.

- Advertisement -

Latest Posts

Don't Miss