Tirupati: ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾಸಕ ಟಿ.ಎ.ಶರವಣ

Political News: ತಿರುಪತಿ: ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಶ್ರೀ ಟಿ.ಎ.ಶರವಣ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತಿರುಮಲ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ನೆಮ್ಮದಿ, ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ. ರಾಜ್ಯವು ಅಭಿವೃದ್ಧಿ ಹಾಗೂ ಪ್ರಗತಿಯ ಪಥದಲ್ಲಿ ಮುನ್ನಡೆಯಲಿ, ರೈತರು, ಕಾರ್ಮಿಕರು, ಯುವಕರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಶ್ರೀ ತಿರುಪತಿ ತಿಮ್ಮಪ್ಪನಲ್ಲಿ ವಿಶೇಷವಾಗಿ ಪ್ರಾರ್ಥಿಸಿದರು.

ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾವುದೇ ಆಡಂಬರಕ್ಕಿಂತ ಜನರ ಒಳಿತೇ ಮುಖ್ಯ ಎಂಬ ಆಶಯದೊಂದಿಗೆ, ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಶ್ರೀ ಟಿ.ಎ.ಶರವಣ ಅವರು ತಿಳಿಸಿದರು.

ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದದಿಂದ ನಾಡಿನ ಜನರ ಸಂಕಷ್ಟಗಳು ದೂರವಾಗಿ, ಪ್ರತಿಯೊಬ್ಬರ ಬದುಕಿನಲ್ಲಿ ಶಾಂತಿ, ನೆಮ್ಮದಿ, ಆರೋಗ್ಯ ಮತ್ತು ಐಶ್ವರ್ಯ ತುಂಬಲಿ ಹಾಗೂ ಕರ್ನಾಟಕ ಸರ್ವತೋಮುಖ ಅಭಿವೃದ್ಧಿ ಕಾಣಲಿ ಎಂದು ಅವರು ಹಾರೈಸಿದರು.

ಈ ಶುಭ ಸಂದರ್ಭದಲ್ಲಿ ಶ್ರೀ ಟಿ.ಎ.ಶರವಣ ಅವರಿಗೆ ಮಂತ್ರಿಗಳು , ಶಾಸಕರು , ಕುಟುಂಬಸ್ಥರು, ಅಭಿಮಾನಿಗಳು, ಸ್ನೇಹಿತರು ಹಾಗೂ ಜೆಡಿಎಸ್ ಕಾರ್ಯಕರ್ತರು ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿ, ಅವರ ಸಾರ್ವಜನಿಕ ಹಾಗೂ ರಾಜಕೀಯ ಸೇವೆ ಮತ್ತಷ್ಟು ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸಿದರು.

About The Author