Saturday, January 18, 2025

Latest Posts

ತಿರುಪತಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ7ಕ್ಕೇರಿಕೆ: ಬಳ್ಳಾರಿ ಮೂಲದ ಮಹಿಳೆ ಸಾವು

- Advertisement -

Tirupati News: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಎಂದು ಬಯಸಿ, ತಿರುಪತಿಗೆ ಬಂದ ಭಕ್ತರ ನಡುವೆ ನೂಕು ನುಗ್ಗಲು ಉಂಟಾಗಿದ್ದು, ಕಾಾಲ್ತುಳಿತದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಘಟನೆಯಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. 50 ವರ್ಷ ವಯಸ್ಸಿನ ನಿರ್ಮಲಾ ಎಂಬಾಕೆ ಮೃತ ದುರ್ದೈವಿಯಾಗಿದ್ದು, ಇವರೊಂದಿಗೆ ವೈಜಾಗ್‌ನ ರಜನಿ, ಲಾವಣ್ಯ, ಶಾಂತಿ, ಸೇಲಂನ ಮಲ್ಲಿಕಾ, ನರಸಿಂಹ ಪಟ್ಟಣದ ನಾಯ್ಡು ಬಾಬು ಎಂಬುವವರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಚಂದ್ರಬಾಬು ನಾಾಯ್ಡು ಮೃತ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ. ಮತ್ತು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಪರಿಸ್ಥಿತಿ ಪರಿಶೀಲಿಸಲಿದ್ದಾರೆ.

ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕಾಗಿ ಟಿಕೇಟ್ ತೆಗೆದುಕೊಳ್ಳುವಾಗ, ಕೆಲ ಭಕ್ತರು ಎಡವಟ್ಟು ಮಾಡಿದ ಕಾರಣ, ಟಿಕೇಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಉಂಟಾಗಿ ಹಲವರಿಗೆ ಗಾಯವಾಗಿ, ಆಸ್ಪತ್ರೆ ಸೇರಿದ್ದು, 7 ಮಂದಿ ಮೃತಪಟ್ಟಿದ್ದಾರೆ.

 

- Advertisement -

Latest Posts

Don't Miss