ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ಗುಂಡಿ ಗಮನ ಆ್ಯಪ್ ಬಿಡುಗಡೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಪರಿಹಾರವಾಗಿ ಗುಂಡಿ ಗಮನ ಆ್ಯಪ್ ಬಿಡುಗಡೆ ಮಾಡಲಾಗಿದೆ.

ನಿನ್ನೆ ರಾತ್ರಿ ಡಿಸಿಎಂ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆ ಮಾಡಿದರು. ಅಲ್ಲದೇ ಬಿಡುಗಡೆಯಾಗಿರುವ ಆ್ಯಪ್ ಮೂಲಕ ರಸ್ತೆ ಗುಂಡಿ ಸಮಸ್ಯೆ ಬಗ್ಗೆ ತಿಳಿಸಿದರೆ, ಬಹುಬೇಗ ಕ್ರಮ ಕೈಗ“ಳ್ಳಲಾಗುತ್ತದೆ ಎಂದರು.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಡಿಸಿಎಂ , ಸುಗಮ ಸಂಚಾರಕ್ಕೆ ಬದ್ಧ ಇಂದು ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದೆ. ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, ‘ಗುಂಡಿ ಗಮನ’ ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ ಎಂದು ಬರೆದಿದ್ದಾರೆ.

About The Author