ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 62 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 39,45,311ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಇಂದು ಸೋಂಕಿತರಾದಂತ 62 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 39,03,442 ಮಂದಿ ಗುಣಮುಖರಾದ ಕಾರಣ, ಈಗ ಬೆಂಗಳೂರಿನಲ್ಲಿ 1,581 ಸೇರಿದಂತೆ ರಾಜ್ಯಾಧ್ಯಂತ 1,777 ಜನ ಸಕ್ರೀಯ ಸೋಂಕಿತರು ಇದ್ದಾರೆ. ಇಂದು ಒಬ್ಬರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 40,050ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.




