www.karnatakatv.net: ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಏಣಿಕೆ ಇಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಇಂದು ಮಧ್ಯಾಹ್ನ ಸ್ಪಷ್ಟವಾಗಲಿದೆ.
ಚುನಾವಣೆಯ ಮತ ಏಣಿಕೆಯು ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ 19 ಸುತ್ತು ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 22 ಸುತ್ತುಗಳ ಏಣಿಕೆ ನಡೆಯುತ್ತದೆ. ಮಧ್ಯಾಹ್ನದ ವೇಳೆಗೆ ಯಾರಿಗೆ ಗೆಲುವು ಎಂಬುದು ಸ್ಪಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಹಾನಗಲ್‌ನಲ್ಲಿ ಶಾಸಕರಾಗಿದ್ದ ಸಿ. ಎಂ. ಉದಾಸಿ ನಿಧನದಿಂದ ಮತ್ತು ಸಿಂಧಗಿಯಲ್ಲಿ ಶಾಸಕರಾಗಿದ್ದ ಎಂ. ಸಿ. ಮುನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಮೂರು ಪಕ್ಷಗಳಿಗೆ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಉಪ ಚುನಾವಣೆ ಇದಾಗಿದೆ. ಅ.30ರಂದು ಉಪ ಚುನಾವಣೆಯ ಮತದಾನ ನಡೆದಿತ್ತು. ಹಾನಗಲ್ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣಲ್ಲಿದ್ದು, ಶೇ 83.44ರಷ್ಟು, ಸಿಂಧಗಿಯಲ್ಲಿ 6 ಅಭ್ಯರ್ಥಿಗಳು ಕಣದಲ್ಲಿದ್ದು, ಶೇ 69.41ರಷ್ಟು ಮತದಾನ ನಡೆದಿತ್ತು.