Tuesday, September 16, 2025

Latest Posts

ಕಾಶಿ ವಿಶ್ವನಾಥ ಕಾರಿಡಾರ್ : ಪ್ರಧಾನಿ ಮೋದಿಯಿಂದ ಇಂದು ಲೋಕಾರ್ಪಣೆ

- Advertisement -

ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ  ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ ಒಂದಷ್ಟು ಅಡೆತಡೆಗಳು ಎದುರಾಗ್ತಿದ್ವು. ಈಗ ಎಲ್ಲಾ ಸಮಸ್ಯೆಗಳು ಪರಿಹಾರವಾಗೋ ಸಮಯ ಬಂದಿದೆ.

ವಾರಣಾಸಿಯಲ್ಲಿ ಸ್ಪರ್ಧೆ ಮಾಡುವುದಕ್ಕೂ ಮುನ್ನ ನಾನು ಇಲ್ಲಿ ಬದಲಾವಣೆ ಮಾಡ್ತೀನಿ ಅಂದಿದ್ರು. ಅದೇ ರೀತಿ 12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಮೋದಿ ಬದಲಾವಣೆ ತಂದಿದ್ದಾರೆ ಇಡೀ ಕಾರ್ಯಕ್ರಮ ದೇಶಾದ್ಯಂತ ನೇರ ಪ್ರಸಾರ ಮಾಡಲಾಗುತ್ತದೆ. ದೇಶಾದ್ಯಂತ 2000ಕ್ಕೂ ಹೆಚ್ಚು ಸಂತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಾಸ್ತುಶಿಲ್ಪಿ ಭೀಮಲ್ ಪಟೇಲ್ ಅವರಿಂದ ಕಾರಿಡಾರ್ ವಿನ್ಯಾಸ ಮಾಡಲಾಗಿದೆ. ಈ ಕಾರಿಡಾರ್ನಿಂದ ಯಾವುದೇ ಅಡೆತಡೆ ಇಲ್ಲದೆ ವಿಶ್ವನಾಥನ ದರ್ಶನ ಪಡೆಯೋದಕ್ಕೆ ಸಾಧ್ಯವಾಗಲಿದೆ. ಕಾಶಿ ದೇಗುಲ ಹಾಗೂ ಗಂಗಾ ನದಿಯ ನಡುವಿನ ಸಂಚಾರದ ಅವಧಿ ಈ ಕಾರಿಡಾರ್ನಿಂದ ಕಡಿತವಾಲಿದೆ. ಕಾರಿಡಾರ್‌ ಭಾಗದಲ್ಲಿ 10 ಸಾವಿರ ಜನ ಧ್ಯಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು 7,000 ಚದರ ಮೀಟರ್ ವೇದಿಕೆ, 7 ಭವ್ಯ ಪ್ರವೇಶ ದ್ವಾರಗಳನ್ನು ನಿರ್ಮಿಸಲಾಗಿದೆ. ಫುಡ್ ಕೋರ್ಟ್, ವೈದಿಕ ಸೇರಿದಂತೆ ಆಧ್ಯಾತ್ಮಿಕ ಗ್ರಂಥಾಲಯವನ್ನ ಸ್ಥಾಪಿಸಲಾಗಿದೆ. ಜೊತೆಯಲ್ಲಿ ಮೋಕ್ಷ ಗೃಹ ಹಾಗೂ ಗೋಡೋಲಿಯಾ ಗೇಟ್ ಮತ್ತು ಭೋಗಶಾಲಾ ಕೂಡ ತಲೆ ಎತ್ತಿವೆ. ಕಾರಿಡಾರ್ ಉದ್ದಕ್ಕೂ ಭಕ್ತರಿಗಾಗಿ ವಿಶೇಷ ಸ್ಕೈ ಬೀಮ್ ಲೈಟ್ ವ್ಯವಸ್ಥೆಯನ್ನೂ ಮಾಡಲಾಗಿದೆ. 2ನೇ ಹಂತದ ಕಾಮಗಾರಿಯನ್ನ ಮುಂದಿನ ವರ್ಷಕ್ಕೆ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.

ಪ್ರಧಾನಿ ಮೋದಿ 2 ದಿನ ವಾರಾಣಸಿಯಲ್ಲಿಯೇ ಇರಲಿದ್ದು, ಇಂದು ಹಾಗೂ ನಾಳೆ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವನ್ನ ಸ್ಮರಣೀಯವಾಗಿಸಲು ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಇಡೀ ದೇಶದ ಗಮನ ಇದೀಗ ವಾರಾಣಸಿ ಕಡೆಗೆ ನೆಟ್ಟಿದೆ.

- Advertisement -

Latest Posts

Don't Miss