Tuesday, December 24, 2024

Latest Posts

TOP NEWS : ಇಂದಿನ ಪ್ರಮುಖ ಸುದ್ದಿಗಳು – 23/12/2024

- Advertisement -

1.ಸಿಟಿ ರವಿ ಹೇಳಿಕೆ ವಿಡಿಯೋ ಬಿಡುಗಡೆ .ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್

ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ . ಇನ್ನೋಂದ್ಕಡೆ ಸಿ.ಟಿ ರವಿ ಕೂಡ ಕಾನೂನು ಸಮರಕ್ಕೆ ನಿಂತಿದ್ದಾರೆ.

2.ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ ಸುದ್ದಿಗೋಷ್ಠಿ. ದೂರಿನ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ?

ವಿಧಾನ ಪರಿಷತ್​ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನನಗೆ ಧಮ್ಕಿ ಹಾಕಿದ್ದಾರೆ. ಅವರ ಜೊತೆ ಡಿ.ಕೆ. ಶಿವಕುಮಾರ್, ಚನ್ನರಾಜ ಹಟ್ಟಿಹೊಳಿ ಕೂಡ ಧಮ್ಕಿ ಹಾಕಿದ್ದರು. ಸುವರ್ಣಸೌಧದಲ್ಲೇ ನನ್ನ ಮೇಲೆ ದಾಳಿಗೆ ಪ್ರಯತ್ನ ನಡೆದಿತ್ತು. ಪೊಲೀಸರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಾರೆ. ಆದರೆ, ನಾನು ನೀಡಿದ ದೂರಿನ ಮೇಲೆ ಯಾಕೆ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ? ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನ ಪರಿಷತ್​ನಲ್ಲಿ ನನ್ನ ತಾಯಿ, ತಂಗಿ, ಪತ್ನಿಯ ಬಗ್ಗೆ ಮಾತಾಡಿದರು. ಈ ಮಹಾತಾಯಿ ಮಾತನಾಡಿದ್ದನ್ನು ತಾವೆಲ್ಲರೂ ನೋಡಿದ್ದೀರಿ. ಅದು ಸರಿಯೇ? ಎಂದು ಚಿಕ್ಕಮಗಳೂರಿನಲ್ಲಿ ವಿಧಾನ ಪರಿಷತ್​ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸದಲ್ಲಿ ಸಿ.ಟಿ. ರವಿ ಸುದ್ದಿಗೋಷ್ಠಿ ನಡೆಸಿದ್ದು, ರಾತ್ರಿಯಿಡೀ 4 ಜಿಲ್ಲೆಗಳಲ್ಲಿ ವ್ಯಾನ್​ನಲ್ಲಿ ನನ್ನನ್ನು ಸುತ್ತಾಡಿಸಿದ್ದಾರೆ. ಗೂಂಡಾಗಳು ನನ್ನ ಮೇಲೆ ಹಲ್ಲೆಗೈದ ಆಡಿಯೋ, ವಿಡಿಯೋ ಇದೆ. ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂದು ಎಂಎಲ್​ಸಿ ಸಿ.ಟಿ. ರವಿ ಹೇಳಿದ್ದಾರೆ. ಈಗಾಗಲೇ ವಿಧಾನ ಪರಿಷತ್ ಸಭಾಪತಿಗೆ ದೂರು ಕೊಟ್ಟಿದ್ದೇವೆ. ಈ ಬಗ್ಗೆ ಸಭಾಪತಿ ಏನು ಕ್ರಮ ಕೈಗೊಳ್ಳುತ್ತಾರೆ ಅಂತಾ ನೋಡಬೇಕು. ಖಾನಾಪುರದಲ್ಲಿ ನನ್ನ ಕೊಲೆ ಯತ್ನದ ಬಗ್ಗೆ ದೂರು ಕೊಟ್ಟಿದ್ದೇನೆ. ಆದರೆ ಪೊಲೀಸರು ಎಫ್​ಐಆರ್​ ದಾಖಲಿಸಿಲ್ಲ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.

3. ಕಾಂಗ್ರೆಸ್ ವಿರುದ್ಧ ಜೋಶಿ ಕಿಡಿ .ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ

ಸಿ.ಟಿ ರವಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿ ಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವ್ರು , ತಮ್ಮ ಮೇಲೆ ಕೊಲೆ ಮಾಡೋ ಸಂಚಿತ್ತು ಎಂದು ಸ್ವತಃ ಸಿ.ಟಿ ರವಿ ಹೇಳಿದ್ದಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ? ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಅಂತ ಜೋಶಿ ಕೆಂಡಕಾರಿದ್ರು. ಅಲ್ಲದೇ ಪೊಲೀಸ್ ಅಧಿಕಾರಿಗಳು ನಡೆಯನ್ನ ಕೂಡ ಜೋಶಿ ತೀವ್ರವಾಗಿ ಖಂಡಿಸಿದರು.

4. ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ.ಜೋಶಿಗೆ ಡಿಕೆಶಿ ಟಾಂಗ್

ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ.ಶಿವಕುಮಾರ್ ಇನ್ನೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದಾನೆ. ಬಿಜೆಪಿಯವರ ಪ್ರತಿಭಟನೆಗೆ ನಾನು ಹೆದರುವುದಿಲ್ಲ ಅಂತ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲೆಸೆದರು.ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ವೇಳೆ ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ , “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ನೀಡಿದ್ದಾರೆ. ಇದೆಲ್ಲವೂ ಅವರ ನೇತೃತ್ವದ ಹೋರಾಟದ ಫಲ. ಇದೆಲ್ಲವನ್ನು ಉಳಿಸಿಕೊಂಡು ಸರಿಯಾದ ರೀತಿಯಲ್ಲಿ ಜಾರಿಯಲ್ಲಿಡಬೇಕು. ಗಾಂಧೀಜಿ ಅವರನ್ನು ದಿನನಿತ್ಯ ನೆನೆಯಬೇಕು ಎಂಬ ಕಾರಣಕ್ಕೆ ಮಹಾತ್ಮ ಗಾಂಧಿಜಿ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಣ ಮಾಡಲಾಗಿದೆ. ಮಹಾತ್ಮ ಎಂಬ ಹೆಸರು ಪಡೆದ ನಾಯಕನ ಸ್ಮರಣೆ ಮಾಡುವ ಆಚರಣೆ ವೇಳೆ ಪ್ರತಿಭಟನೆ ಮಾಡುತ್ತೇವೆ ಎಂದರೆ ನಾವು ಹೆದರುತ್ತೇವಾ?” ಅಂತ ಸವಾಲೆಸೆದರು. ಅಲ್ಲದೇ “ನಾನು ಜೋಷಿ ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಅದಕ್ಕೆ ಗೃಹಸಚಿವರು, ಪೊಲೀಸರು ಉತ್ತರ ನೀಡುತ್ತಾರೆ” ಎಂದು ತಿಳಿಸಿದರು. ಸಿ.ಟಿ. ರವಿ ಅವರನ್ನು ಸುತ್ತಾಡಿಸಿದ್ದರ ಬಗ್ಗೆ ಮಾತನಾಡುವ ಬಿಜೆಪಿಯವರು ಸಿ.ಟಿ ರವಿ ಮಹಿಳೆಯರ ಬಗ್ಗೆ ಆಡಿರುವ ಮಾತಿನ ಬಗ್ಗೆ ಯಾರೂ ಕೇಳುತ್ತಿಲ್ಲ ಎಂದು ಕೇಳಿದಾಗ, “ಈ ವಿಚಾರವನ್ನು ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಈ ವಿಚಾರವಾಗಿ ನಾವು ಈಗ ಮಾತನಾಡುವುದಿಲ್ಲ. 27ರಂದು ಕಾರ್ಯಕ್ರಮಗಳು ಮುಗಿಯಲಿ ನಂತರ ಮಾತನಾಡುತ್ತೇವೆ” ಎಂದರು. ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಕಾರಣ ಎಂಬ ರೀತಿ ಬಿಂಬಿಸಲಾಗುತ್ತಿದೆ ಎಂದು ಕೇಳಿದಾಗ, “ನೀವು ಬಲಿಷ್ಠರಾಗಿದ್ದಷ್ಟು ಹೆಚ್ಚು ಶತ್ರುಗಳು. ನೀವು ಕಡಿಮೆ ಶಕ್ತಿಶಾಲಿಯಾದರೆ ಕಡಿಮೆ ಶತ್ರುಗಳು, ನೀವು ದುರ್ಬಲರಾಗಿದ್ದರೆ ಯಾವುದೇ ಶತ್ರುಗಳಿರುವುದಿಲ್ಲ. ಹೆಚ್ಚು ಕೆಲಸ ಮಾಡಿದಷ್ಟು ಹೆಚ್ಚು ತಪ್ಪುಗಳು, ಕಡಿಮೆ ಕೆಲಸ ಮಾಡಿದಷ್ಟು ಕಡಿಮೆ ತಪ್ಪುಗಳು, ಕೆಲಸಗಳೇ ಮಾಡದಿದ್ದರೆ ತಪ್ಪುಗಳೇ ಇರುವುದಿಲ್ಲ” ಎಂದು ತಿಳಿಸಿದರು. ಸರ್ಕಾರಕ್ಕೆ ನಾಡಿನ ಭವಿಷ್ಯದ ಬಗ್ಗೆ ಚಿಂತೆ ಇಲ್ಲ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಬಗ್ಗೆ ಚನ್ನಪಟ್ಟಣದಲ್ಲಿ ಪ್ರತ್ಯೇಕವಾಗಿ ಮಾತನಾಡುತ್ತೇನೆ” ಎಂದರು.

5. ಮಹಿಳೆ ವೇಲ್ ಎಳೆದಿದ್ದ ಕೇಸ್. ​6 ವರ್ಷದ ನಂತ್ರ ಸಿದ್ದು ವಿರುದ್ಧ ದೂರು

ಬಿಜೆಪಿ ಎಂಎಲ್​ಸಿ ಸಿಟಿ ರವಿ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಶಬ್ದದಲ್ಲಿ ನಿಂದಿಸಿದ್ದಾರೆ ಎಂಬ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಟಿ ರವಿ ಜೈಲಿಗೂ ಹೋಗಿ ಬಂದರು. ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ ಬರೆಯುವುದಾಗಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ಸಿಎಂ ಸಿದ್ದರಾಮಯ್ಯ ಮಹಿಳೆ ವೇಲ್ ಎಳೆದು ಅಪಮಾನಿಸಿದ್ದಾರೆ ಎನ್ನಲಾದ 6 ವರ್ಷದ ಹಿಂದಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್​ಲೈನ್ ಮೂಲಕ ಬಿಜೆಪಿ ಕಾರ್ಯಕರ್ತ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಅಂದರೆ 6 ವರ್ಷದ ಹಿಂದೆ, ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆ ವೇಲ್ ಎಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ವಕ್ತಾರ ಸಿ‌.ಟಿ.ಮಂಜುನಾಥ್​​ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ದೂರು ನೀಡಿದ್ದಾರೆ. ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದಾರೆಂದು ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಮಹಿಳೆ ವೇಲ್ ಎಳೆದು ಅಪಮಾನಿಸಿದ್ದರು. ಆ ಮಹಿಳೆ ದೂರು ದಾಖಲಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಅಲ್ಲದೇ ದೂರು ಸಲ್ಲಿಸದಂತೆ ಮಹಿಳೆಗೆ ಬೆದರಿಕೆ ಹಾಕಿರಬಹುದು. ಸೀರೆ ಎಳೆದು ಅವಮಾನಿಸಿರುವ ವಿಡಿಯೋ ಸಹ ವೈರಲ್​ ಆಗಿತ್ತು. ಕೂಡಲೇ ಸಿಎಂ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಬೇಕು. ತನಿಖೆ ಮಾಡಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ದೂರಿನ ಮೂಲಕ ಒತ್ತಾಯಿಸಲಾಗಿದೆ.

 

6. ಸಿಹಿ ಸುದ್ದಿ ಕೊಟ್ಟ ಹೆಚ್. ಡಿ. ಕೆ. ಭದ್ರಾವತಿ ಉಕ್ಕು ಕಾರ್ಖನೆಗೆ ಪುನಶ್ಚೇತನ

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ.ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

7. ಡಿಕೆಶಿಗೆ ಮಾತಿಗೆ ಹೆಚ್ ಡಿ ಕೆ ಕೌಂಟರ್ . ಸಿಡಿ ಬಿತ್ತಿದ್ದೇ ಕಾಂಗ್ರೆಸ್ ಕೊಟ್ಟ ಕೊಡುಗೆ!

ಹಾಸನ ಜಿಲ್ಲೆಗೆ ದೇವೇಗೌಡರ ಕುಟುಂಬ ಏನು ಕೊಡುಗೆ ನೀಡಿದೆ ಅಂತ ಈ ಹಿಂದೆ ಡಿಸಿಎಂ ಡಿಕೆಶಿ ಗೌಡ್ರು ಕುಟುಂಬಕ್ಕೆ ಟಾಂಗ್ ಕೊಟ್ಟಿದ್ರು. ಸದ್ಯ ಡಿಕೆಶಿ ಸ್ಟೇಟ್ ಮೆಂಟ್ ಗೆ ಕೇಂದ್ರ ಸಚಿವ ಹೆಚ್ ಡಿ.ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ ಅಂತ ಹೆಚ್ ಡಿ ಕೆ, ಡಿಕೆಶಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

8.ಪಿಯೂಷ್ ಗೋಯಲ್ ಸಕಲೇಶಪುರಕ್ಕೆ ಭೇಟಿ .ಕಾಫಿ ಬೆಳೆಗಾರರಿಗೆ ಸಚಿವರ ಅಭಯ

ಪಿಯೂಷ್ ಗೋಯಲ್ ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಅಂತ ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಅಂತ ಕುಮಾರಸ್ವಾಮಿ ಹೇಳಿದರು.

9.
ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕೆ . ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ

ಸಿ.ಟಿ ರವಿ ಪ್ರಕರಣದಲ್ಲಿ ಪೊಲೀಸ್ರ ನಡೆಗೆ ಸಿ.ಟಿ.ರವಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ರು. ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿ, ರಾಜ್ಯಸಭೆಯಲ್ಲಿನ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಇವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇದು ರಾಜ್ಯಸಭೆಯಲ್ಲಿ ಪ್ರಾರಂಭವಾದದ್ದು. ಈ ವಿಷಯ ಆ ಸದನಕ್ಕೆ ಸಂಬಂಧಪಟ್ಟ ವಿಷಯ. ಅಮಿತ್ ಶಾ ಅವರು ವಿಧಾನ ಪರಿಷತ್ ಸದಸ್ಯರಾ? ಅಂತ ಅವರು ಖಾರವಾಗಿ ಪ್ರಶ್ನಿಸಿದರು.ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆಗೆ ವಿಶೇಷವಾದ ಅವಕಾಶ ಕೊಡುತ್ತೇವೆ ಎಂದು ಡಂಗೂರ ಹೊಡೆದರು. ನಿನ್ನೆಯೂ ಒಬ್ಬ ಹೆಣ್ಣುಮಗಳು ಬಳ್ಳಾರಿಯಲ್ಲಿ ಮಗುವಿಗೆ ಜನ್ಮ ಕೊಡುವಾಗ ತೀರಿಕೊಂಡಿದ್ದಾಳೆ. ಪ್ರತಿನಿತ್ಯ ಈ ಸಾವುಗಳು ಸಂಭವಿಸುತ್ತಿವೆ. ಇದ್ಯಾವುದರ ಬಗ್ಗೆ ರಾಜ್ಯ ಸರಕಾರಕ್ಕೆ ಕಿಂಚಿತ್ತೂ ಚಿಂತೆ ಇಲ್ಲ ಅಂತ ಕೇಂದ್ರ ಸಚಿವ ಕಟುವಾಗಿ ಟೀಕಿಸಿದರು.

10. ಮಾನವೀಯತೆ ಮರೆತ್ರಾ ಅಲ್ಲು.?.ಪುಷ್ಪಾ VS ತೆಲಂಗಾಣ ಸರ್ಕಾರ

ತೆಲಂಗಾಣದ ಹೈದ್ರಾಬಾದ್​​​ನ ಸಂಧ್ಯಾ ಥಿಯೇಟರ್​​​ನಲ್ಲಿ ಪುಷ್ಪಾ -2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತ ಸಂಭವಿಸಿತ್ತು.. ಓರ್ವ ಮಹಿಳೆ ಸಾವನ್ನಪ್ಪಿ, ಅವರ ಮಗು ಕೋಮಾಕ್ಕೆ ಹೋಗಿದೆ. ಇದೇ ವಿಚಾರ ಈಗ ಸರ್ಕಾರ ವರ್ಸಸ್ ಚಿತ್ರರಂಗ ಎನ್ನುವಂತಾಗಿದೆ. ಒಬ್ಬ ಮಹಿಳೆ ಬಲಿಯಾದ ಮೇಲೂ ಅಲ್ಲು ಅರ್ಜುನ್ ರೋಡ್ ಶೋ ಮಾಡಿದ್ದಾನೆ. ಅವನು ಮನುಷ್ಯನೇ ಅಲ್ಲ ಅಂತ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ ನಡೆಸಿದ್ರು. ಅಲ್ದೇ ಈಗ ಇಡೀ ಟಾಲಿವುಡ್​ಗೆ ಕೊಡ್ತಿದ್ದ ಸವಲತ್ತುಗಳನ್ನೇ ಸಿಎಂ ಬಂದ್ ಮಾಡಿದ್ದಾರೆ. ಇನ್ನುಮುಂದೆ ತೆಲಂಗಾಣದಲ್ಲಿ ಬೆನ್ ಫಿಟ್ ಶೋ, ಟಿಕೆಟ್ ದರ ಹೆಚ್ಚಳಕ್ಕೆ ಅವಕಾಶ ಇಲ್ಲ ಅಂತ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಇನ್ನು ಥಿಯೇಟರ್ ಹೊರಗಡೆ ಕಾಲ್ತುಳಿತ ಆದ ಬಗ್ಗೆ ಸಿನಿಮಾ ನೋಡ್ತಿದ್ದ ನಟ ಅಲ್ಲು ಅರ್ಜುನ್​​ಗೆ ಮಾಹಿತಿ ನೀಡಲಾಯ್ತಂತೆ.. ಆದರೂ ಕೂಡ ಅಲ್ಲು ಅರ್ಜುನ್ ಹೊರಗಡೆ ಬಂದು ಪರಿಸ್ಥಿತಿ ನೋಡಲಿಲ್ಲ. ಸಿನಿಮಾ ಪೂರ್ತಿ ಮುಗಿವರೆಗೂ ಹೋಗಲ್ಲ ಅಂತ ಹಠ ಹಿಡಿದು ಕೂತಿದ್ರಂತೆ. ಬಳಿಕ ಹಿರಿಯ ಅಧಿಕಾರಿಗಳು ಬಂದು ಬೈದು ತರಾಟೆ ತೆಗೆದುಕೊಂಡಮೇಲಷ್ಟೇ ಅಲ್ಲು ಅರ್ಜುನ್ ಥಿಯೇಟರ್​​​ನಿಂದ ಹೊರಗೆ ಹೋಗಿದ್ದಾರೆ ಅಂತ ತೆಲಂಗಾಣ ಪೊಲೀಸರು ಮಾಹಿತಿ ನೀಡಿದ್ದಾರೆ.

11. 5, 8ನೇ ಕ್ಲಾಸ್ ಸ್ಟುಡೆಂಟ್ಸ್ ಎಚ್ಚರಿಕೆ .ಫೇಲ್ ಆದ್ರೆ ಫೇಲ್ !

5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್‌ ಆದರೆ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮಗಳು – 2010 ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ಹೊಸ ನಿಯಮಗಳ ಪ್ರಕಾರ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿದೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಫೇಲ್‌ ಆದರೆ ಅವರು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ. ವಿದ್ಯಾರ್ಥಿ 5 ಮತ್ತು 8 ನೇ ತರಗತಿಯಲ್ಲಿ ಫೇಲ್‌ ಆದರೆ ಫಲಿತಾಂಶ ಪ್ರಕಟವಾದ 2 ತಿಂಗಳ ಒಳಗಡೆ ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗುತ್ತದೆ. ಈ ಪರೀಕ್ಷೆಯಲ್ಲೂ ಫೇಲ್‌ ಆದರೆ ಆ ವಿದ್ಯಾರ್ಥಿ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ. ಆದರೆ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿಯನ್ನು ಶಾಲೆಗಳು ಹಾಕುವಂತಿಲ್ಲ ಅಂತ ಶಿಕ್ಷಣ ಸಚಿವಾಲಯ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

 

 

 

 

 

 

 

- Advertisement -

Latest Posts

Don't Miss