www.karnatakatv.net : ಬೆಳಗಾವಿ: ಬೆಳಗಾವಿ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಸತತವಾಗಿ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗಡಿ ಭಾಗ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ ಗಡಿ ಜಿಲ್ಲೆ ಬೆಳಗಾವಿಯನ್ನು ವಿಕ್ಷಣೆ ಮಾಡಲಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾನಗರಿ ಜನ ತತ್ತರಿಸಿಹೊಗಿದ್ದಾರೆ. ಎಲ್ಲೆಡೆ ಸುರಿಯುತ್ತಿರುವ ಮಳೆಗೆ ರೈತರು ಬೆಳೆದ ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದ್ದು.ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ವೈ ಅವರು ನಾಳೆ ಬೆಳಗಾವಿ ಪ್ರವಾಸ ಕೈ ಗೊಂಡಿದ್ದಾರೆ.

ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಡಿಸಿ ಎಂ.ಜಿ ಹಿರೇಮಠ ಅವರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಪ್ರವಾಹದ ಕುರಿತು ಚರ್ಚೆ ನಡೆಸಿದ್ದಾರೆ. ಹಾಗೂ ನಿರಂತರವಾಗಿ ಪೋನ್ ಸಂಪರ್ಕದಲ್ಲಿ ಇದ್ದಾರೆ. ಸಿಎಂ ಅವರು ನಾಳೆ ಜಿಲ್ಲೆಯಲ್ಲಿ ಹೆಚ್ಚು ಮಳೆಗೆ ಹಾನಿ ಆಗಿರುವ ಪ್ರದೇಶದಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗಾವಿ ಜಿಲ್ಲೆಯ ಶೈಕ್ಷಣಿಕ ಜಿಲ್ಲೆ ಚಿಕ್ಕೊಡಿ ಸೇರಿದಂತೆ ವಿವಿಧಡೆ ವಿಕ್ಷಣೆ ಮಾಡಲಿದ್ದಾರೆ.