ನಾಳೆ ಬಜೆಟ್ ಮಂಡನೆ…! ಐದು ಗ್ಯಾರಂಟಿಗೆ ಸಿಗಲಿದೆಯಾ ಅಸ್ತು..?!

 State News:ಕರ್ನಾಟಕದ ಜನರು ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರ 14 ನೇ ಬಜೆಟ್ ನಾಳೆ ಮಂಡನೆಯಾಗಲಿದೆ. ನಾಳಿನ ಬಜೆಟ್ ನಲ್ಲಿ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಕುರಿತಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅಲ್ಲದೆ ಉಚಿತ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುತ್ತದೆ, ಹೆಚ್ಚುವರಿ ಅನುದಾನವನ್ನು ಯಾವ ರೀತಿ ಬಿಡುಗಡೆ ಮಾಡುತ್ತದೆ ಎಂಬುದೇ ಎಲ್ಲರ ಕುತೂಹಲ. ಇನ್ನು ಬಜೆಟ್‌ ಗಾತ್ರವನ್ನು ಕೂಡ 3.25 ಲಕ್ಷ ಕೋಟಿ ರೂ.ಗಳಿಗೆ ಏರಿಕೆ ಮಾಡುವುದಾಗಿ ಈಗಾಗಲೇ ಸಿದ್ದರಾಮಯ್ಯ ಹೇಳಿದ್ದಾರೆ.

ಗಗನಕ್ಕೇರಿದ ಟೊಮ್ಯಾಟೊ ಬೆಲೆ: ಗ್ರಾಹಕರು ಕಂಗಾಲು..!

ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!

ವಾಹನ ಸವಾರರಿಗೆ ಗುಡ್ ನ್ಯೂಸ್..?!

About The Author