ತೆಲಂಗಾಣ: ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅವರು, ಹೈದರಾಬಾದ್ ನ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಸರ್ಕಲ್ ಇನ್ಸ್ ಪೆಕ್ಟರ್ ಮಾಹಿತಿ ನೀಡಿದ್ದು, ಫ್ಯಾಷನಲ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅವರು, ತಮ್ಮ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಠಡೆಯಲ್ಲಿ ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್ ಕೂಡ ಪತ್ತೆಯಾಗಿದೆ. ಈ ಸಂಬಂಧ ಅನುಮಾನಾಸ್ಪದ ಸಾವು ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರೋದಾಗಿ ತಿಳಿಸಿದ್ದಾರೆ.




