Monday, January 6, 2025

Latest Posts

TOP NEWS : ಇಂದಿನ ಪ್ರಮುಖ ಸುದ್ದಿಗಳು – 03/01/2025

- Advertisement -

 

 

1. ದರ ಹೆಚ್ಚಳ ಖಂಡಿಸಿ ಬೀದಿಗಿಳಿದ ಬಿಜೆಪಿಗರು, ಜನರಿಗೆ ಹೂ ಕೊಟ್ಟು ಕ್ಷಮೆಯಾಚನೆ

ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ , ಕೆಎಸ್‌‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ ಹೆಚ್ಚಳ ಮಾಡಿದೆ. ಸರ್ಕಾರ ನಿರ್ಧಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟಿಕೆಟ್ ದರ ಹೆಚ್ಚಳ ಖಂಡಿಸಿ ಬಿಜೆಪಿ ನಾಯಕರು ಬೀದಿಗಳಿದಿದ್ದು, ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಯಾಣಿಕರಿಗೆ ಹೂ ಕೊಟ್ಟು ರಾಜ್ಯ ಸರ್ಕಾರದ ಪರವಾಗಿ ಬಿಜೆಪಿ ನಾಯಕರು ಕ್ಷಮೆ ಕೇಳಿದರು. ಈ ವೇಳೆ ಮಾತನಾಡಿದ ಆರ್ ಅಶೋಕ್, ನಂಬಿ ಓಟ್ ಮಾಡಿದ್ರಿ, ಬೆಲೆ ಏರಿಕೆ ಮಾಡೊಲ್ಲಾ ಎಂದು ಮಾತು ಕೊಟ್ಟಿದ್ರು, ಮಾತಿಗೆ ದ್ರೋಹ ಬಗೆದಿದ್ದಾರೆ. ಸಾರಿಗೆ ದರ ಹೆಚ್ಚಳ ಅಷ್ಟೇ ಅಲ್ಲಾ ಹಾಲು, ನೀರಿನ ದರ ಜಾಸ್ತಿ ಮಾಡ್ತಿನಿ. ಎಲ್ಲಾ ಬೆಲೆಯನ್ನೂ ಗಗನಕ್ಕೆ ಮುಟ್ಟಿಸುವಂತಹ ಕೆಲಸ ಮಾಡಿದ್ದೇನೆ ಅಂತ ಸಿದ್ದರಾಮಯ್ಯ ಶಪಥ ಮಾಡಿದ್ದಾರೆ ಎಂದು ಅಶೋಕ್ ಆರೋಪಿಸಿದರು. ಸಿದ್ದರಾಮಯ್ಯ ಅವರಿಗೆ ಮಾತು ನಿಂತು ಹೋಗಿದೆ, ಪ್ರಯಾಣಿಕರು ಶಾಪ ಹಾಕ್ತಿದ್ದಾರೆ. ನಂಬಿ ಓಟು ಹಾಕಿದ್ವಿ ಈಗ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಶಾಪ ಹಾಕುತ್ತಿದ್ದಾರೆ. ಹೆಂಡತಿಗೆ ಫ್ರೀ ಕೊಟ್ಟು ನಮಗೆ ಜಾಸ್ತಿ ಮಾಡಿದರೆ ಏನು ಉಪಯೋಗ ಎಂದು ಹೇಳುತ್ತಿದ್ದಾರೆ. ನಾವೇ ಸಿದ್ದರಾಮಯ್ಯ ಅವರ ಪರವಾಗಿ ಕಾಲಿಗೆ ಬಿದ್ದು ಕ್ಷಮೆ ಕೇಳುತ್ತೇವೆ ಎಂದು ಹೇಳಿದರು.ಹೊಸ ವರ್ಷಕ್ಕೆ ಸಿಎಂ ಸಿದ್ದರಾಮಯ್ಯ ಬಸ್ ದರ ಏರಿಕೆ ಗಿಫ್ಟ್ ಕೊಟ್ಟಿದ್ದಾರೆ ಎಂದು ಅಶೋಕ್ ವ್ಯಂಗ್ಯವಾಡಿದ್ರು

2.ಏಯ್ ಮೈ ಮುಟ್ಟಿದ್ರೆ ಹುಷಾರ್.ಅಧಿಕಾರಿ ವಿರುದ್ಧ ಆರ್ ಅಶೋಕ್ ಕಿಡಿ

ರಾಜ್ಯದ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬಿಎಂಟಿಸಿ , ಕೆಎಸ್‌‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ಶೇ 15 ರಷ್ಟು ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೆ ಜನ ಸಾಮಾನ್ಯರು ಸರ್ಕಾರದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ವಿಪಕ್ಷ ಬಿಜೆಪಿ ಕೂಡ ಸರ್ಕಾರದ ಬೆಲೆ ಹೆಚ್ಚಳದ ಕ್ರಮವನ್ನು ತೀವ್ರವಾಗಿ ಖಂಡಿಸುತ್ತಿದೆ. ಮೆಜಿಸ್ಟಿಕ್ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಕಿಡಿ ಕಾರಿದ್ದಾರೆ. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು, ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆಗಿರುವ ಘಟನೆ ನಡೆದಿದೆ. ಮಾತ್ರವಲ್ಲ ಏಕವಚನದಲ್ಲಿ ಕೆಟ್ಟ ಪದಗಳ ಮೂಲಕ ನಿಂದಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ತಡೆಯಲು ಬಂದ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಆರ್.ಅಶೋಕ್, ನನ್ನ ತಳ್ಳೋದು ಮಾಡಿದ್ರೆ ಹುಷಾರ್, ಏಯ್ ಬರ್ಕೊಡೋ, ಏಯ್ ಹೊಡಿತಿಯಾ ಹೊಡಿ, ಏಯ್ ನಾಟಕ ಆಡ್ಯಾ ಇದ್ಯಾ, ಏಯ್ ನಿನ್…. ಚಪ್ಪಲಿಲಿ ಹೊಡೀತಿನಿ. ಅದನ್ನೇ ಬೊಗಳು ಎನ್ನುವ ಮೂಲಕ ಪೊಲೀಸ್ ಅಧಿಕಾರಿಯನ್ನು ಆರ್ ಅಶೋಕ್ ತಳ್ಳಿದ್ದಾರೆ. ಆ ಮೂಲಕ ಇಲ್ಲದ ವಿವಾದವನ್ನು ಅಶೋಕ್ ಮೈಮೇಲೆ ಎಳೆದುಕೊಂಡಿದ್ದಾರೆ.

3.ಬೆಂಗಳೂರಿಗರಿಗೆ ಮತ್ತೆ ಶಾಕ್!,ಶೀಘ್ರವೇ ಮೆಟ್ರೋ ದರ ಏರಿಕೆ ಸಾಧ್ಯತೆ

ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ ಕೆಎಸ್‌‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ ಹೆಚ್ಚಳ ಮಾಡಿದೆ. ಅಲ್ಲದೇ ಬೆಂಗಳೂರು ಜನರಿಗೆ ನೀರಿನ ವಿಷಯದಲ್ಲೂ ಶಾಕ್ ನೀಡಿದ್ದು, ಮುಂದಿನ ದಿನಗಳಲ್ಲಿ ನೀರಿನ ದರದಲ್ಲೂ ಹೆಚ್ಚಳವಾಗಬಹುದು ಎನ್ನಲಾಗಿದೆ. ಇದೂ ಕೂಡ ಜನವರಿಯಲ್ಲೇ ನಿರ್ಧಾರವಾಗಲಿದ್ದು, ಇದೀಗ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಈ ಮೂಲಕ ಶೀಘ್ರದಲ್ಲಿಯೇ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಇನ್ನು ದರ ಪರಿಷ್ಕರಣೆ ಸಂಬಂಧ ಜನವರಿ 2ನೇ ವಾರದಲ್ಲಿ ಮೀಟಿಂಗ್ ನಡೆಯಲಿದ್ದು, ಈ ಬೋರ್ಡ್ ಮೀಟಿಂಗ್ ಬಳಿಕ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೆಟ್ರೊ ಟಿಕೆಟ್ ದರ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಲಿದೆ, ಎಷ್ಟು ಮಾಡ್ಬೇಕು ಎಂಬುದನ್ನು ಮುಂದಿನ ಮೀಟಿಂಗ್‌ನಲ್ಲಿ ಚರ್ಚಿಸಿ ನಿರ್ಧಾರವಾಗುತ್ತದೆ. ಕಳೆದ ತಿಂಗಳು ಸಾರ್ವಜನಿಕರ ಸಭೆ ಕರೆದು ದರ ಪರಿಷ್ಕರಣೆಯನ್ನು ನಡೆಸಲಾಗಿತ್ತು, ಈ ಬೆನ್ನಲೇ ಇದೀಗ ಸರ್ಕಾರ ಮೆಟ್ರೋ ಟಿಕೆಟ್‌ ದರವನ್ನೂ ಹೆಚ್ಚಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ.

4. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಮೀಟಿಂಗ್‌,ಡಿಕೆಶಿ ಇಲ್ಲದೆ ಸಿಎಂ ಜೊತೆ ಸಚಿವರ ಚರ್ಚೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸದ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿದ್ದಾರೆ. ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರ ಡಿನ್ನರ್‌ ಮೀಟಿಂಗ್‌ ಜೋರಾಗಿ ನಡೆದಿದೆ. ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಪಾರ್ಟಿ ನಡೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಈ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಬಣದ ಶಾಸಕರೇ ಇರುವುದು ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

5 ಬಾಣಂತಿಯರ ಸಾಲು ಸಾಲು ಸಾವು ಪ್ರಕರಣ ,ಕೇಂದ್ರಕ್ಕೆ ಪತ್ರ ಬರೆದ ಸಂಸದ ಸುಧಾಕರ್

ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ ಸುಧಾಕರ್‌ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಗೆ ಮನವಿ ಮಾಡಿದ್ದಾರೆ. ಈ ಕುರಿತು ಸಚಿವರಿಗೆ ಪತ್ರ ಬರೆದಿರುವ ಸುಧಾಕರ್‌, ಕಳೆದ ಕೆಲವು ತಿಂಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮೃತಪಡುವ ಘಟನೆ ವರದಿಯಾಗುತ್ತಿದೆ. 2024ರ ನವೆಂಬರ್‌ವರೆಗೆ 348 ತಾಯಂದಿರು ಮೃತಪಟ್ಟಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ 4 ತಿಂಗಳಲ್ಲಿ 217 ಪ್ರಕರಣ ವರದಿಯಾಗಿದೆ. ಈ 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ. ಹೆಚ್ಚಿನವು ಪಿಪಿಎಚ್‌ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿದೆ. ಆಂಟಿಬಯೋಟಿಕ್‌ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಮೊದಲಾದವು ಕೂಡ ಇದಕ್ಕೆ ಕಾರಣ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. ಇದರಲ್ಲಿ ಲಿಂಜರ್ಸ್‌ ಲ್ಯಾಕ್ಟೇಟ್‌ ದ್ರಾವಣದಲ್ಲಿ ದೋಷ ಕೂಡ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಸಮಗ್ರವಾದ ಪರಿಶೀಲನೆ ನಡೆಯುವ ಅಗತ್ಯವಿದೆ. ಮೊದಲಿಗೆ, ತಾಯಂದಿರ ಮರಣಕ್ಕೆ ಕಾರಣ ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರ ಶಿಫಾರಸು ಮಾಡಬೇಕಿದೆ. ಗರ್ಭಿಣಿಯರ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಉತ್ತಮ ಸೇವೆ ನೀಡಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕಿದೆ. ಕಬ್ಬಿಣಾಂಶದ ಆಹಾರ ಸೇವನೆ, ತುರ್ತು ಆರೈಕೆ, ಪ್ರತಿ ದಿನ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗರ್ಭಿಣಿಯರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ. ಆದ್ದರಿಂದ ತಾವು ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕದಲ್ಲಿ ಹಾಗೂ ಭಾರತದ ಯಾವುದೇ ಭಾಗದಲ್ಲಿ ತಾಯಂದಿರು ಮೃತಪಡದಂತೆ ಎಚ್ಚರ ವಹಿಸಲು ಸಾಧ್ಯವಾಗುತ್ತದೆ. ಈ ಎಲ್ಲ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

 

6. ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ,ವೀಡಿಯೋ ವೈರಲ್, DYSP ಅಮಾನತು

ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ,ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು ಡಿಜಿ ಆದೇಶ ಹೊರಡಿಸಿದ್ದಾರೆ.ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿಯನ್ನು ಸಸ್ಪೆಂಡ್ ಮಾಡಲಾಗಿದೆ.

7.ಸಿಎಂ ಇರಲಿ, ಡಿಸಿಎಂ ಆಗಿಯೂ ಡಿಕೆಶಿ ಉಳಿಯಲ್ಲ, ಶಹಜಾದ್‌ ಪೂನಾವಾಲಾ ಸ್ಪೋಟಕ ಹೇಳಿಕೆ

ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಡಿಕೆ ಶಿವಕುಮಾರ್‌ ಅವರನ್ನು ಕಾಂಗ್ರೆಸ್‌ ಹೊರಹಾಕುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಸ್ಫೋಟಕ ಆರೋಪ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಕಡೆಯ ದಿನಗಳ ಬಂದಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಮೊದಲು ಡಿಕೆ ಶಿವಕುಮಾರ್ ನಿಷ್ಠರನ್ನು ಹೊರಹಾಕುತ್ತಾರೆ. ನಂತರ ಅವರನ್ನು ಹೊರಹಾಕುತ್ತಾರೆ. ಸಿಎಂ ಆಗುವುದನ್ನು ಮರೆತುಬಿಡಿ ಅವರು ಡಿಸಿಎಂ ಆಗಿ ಉಳಿಯುವುದಿಲ್ಲ. ಈ ಯೋಜನೆಗೆ ಕಾಂಗ್ರೆಸ್‌ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.ಸಿದ್ದರಾಮಯ್ಯ ಸರ್ಕಾರ ಬಸ್‌ ಪ್ರಯಾಣ ದರವನ್ನು ಹೆಚ್ಚಿಸಿದೆ. ಇದು ಕಾಂಗ್ರೆಸ್ ಪಕ್ಷದ ಖಾತಾ ಕಟ್ ಲೂಟಿ ಮಾದರಿ. ಕಾಂಗ್ರೆಸ್ ಹೋದಲ್ಲೆಲ್ಲಾ ಲೂಟಿ ಹೊಡೆಯತ್ತಿದೆ. ಆರ್ಥಿಕತೆಯನ್ನು ವಿನಾಶದ ಅಂಚಿಕೆ ತೆಗೆದುಕೊಂಡು ಹೋಗುತ್ತಿದೆ ಎಂದು ಕಿಡಿಕಾರಿದರು. ಕರ್ನಾಟಕದಲ್ಲಿ ನೀರು, ಪೆಟ್ರೋಲ್, ಡೀಸೆಲ್, ಹಾಲು ಮತ್ತು ಎಲ್ಲದರ ದರ ಹೆಚ್ಚಳವಾಗಿದೆ. ಇದರ ಜೊತೆಗೆ ನಾನಾ ರೀತಿಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲಾಗಿದೆ. ಉಚಿತ ಬಸ್‌ ಪ್ರಯಾಣದ ಭರವಸೆ ನೀಡಿದ್ದಾರೆ, ಬೇರೆ ಮೂಲದಿಂದ ಲೂಟಿ ಹೊಡೆಯುತ್ತಿದ್ದಾರೆ ಎಂದು ದೂರಿದರು.ಮುಡಾ ಹಗರಣ, ವಾಲ್ಮೀಕಿ ಹಗರಣ ಮತ್ತು ನಕಲಿ ಗ್ಯಾರಂಟಿಗಳಂತಹ ಹಗರಣಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಅದೇ ಉದ್ದೇಶದಿಂದ ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಇನ್ನು ಮೂರು ತಿಂಗಳಲ್ಲಿ ಕರ್ನಾಟಕ ಕಾಂಗ್ರೆಸ್ 48,000 ಕೋಟಿ ರೂಪಾಯಿ ಸಾಲ ಮಾಡಲಿದೆ. ಇದು ಸರ್ಕಾರದ ಪರಿಸ್ಥಿತಿ. ಸಿದ್ದರಾಮಯ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ, ಎಲ್ಲವೂ ನಾಶವಾಗಿದೆ ಎಂದು ಆಕ್ರೋಶ ಹೊರಹಾಕಿದರು.

8.‘ಪುಷ್ಪ 2’ ಕಾಲ್ತುಳಿತ ಪ್ರಕರಣ, ಅಲ್ಲು ಅರ್ಜುನ್‌ಗೆ ಜಾಮೀನು ಮಂಜೂರು

ಪುಷ್ಪ 2′ ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ಗೆ ಇಂದು ಹೈದರಾಬಾದ್‌ನ ನಾಂಪಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 31ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಮಧ್ಯಂತರ ಬೇಲ್‌ನಲ್ಲಿದ್ದ ಅಲ್ಲು ಅರ್ಜುನ್‌ಗೆ ಇಂದು ರೆಗ್ಯುಲರ್ ಬೇಲ್ ಸಿಕ್ಕಿದೆ. ಡಿ.4ರಂದು ‘ಪುಷ್ಪ 2’ ಪ್ರೀಮಿಯರ್ ವೇಳೆ, ಕಾಲ್ತುಳಿತದಿಂದ ರೇವತಿ ಎಂಬುವವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್‌ರನ್ನು ಡಿ.13 ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರಾಗಿತ್ತು.

9. ಚೀನಾದಲ್ಲಿ ಮತ್ತೆ ವೈರಸ್ ವಾರ್, ಭಾರಿ ಸಾವಿನಿಂದ ಶವಾಗಾರ ಫುಲ್

ಇಡೀ ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಸರಿಯಾಗಿ 5 ವರ್ಷಗಳಯ್ತು . ಇದೀಗ 5 ವರ್ಷದ ನಂತರ ಚೀನಾದಲ್ಲಿ ಮತ್ತೆ ಹಲವು ವೈರಸ್‌ಗಳು ವ್ಯಾಪಕವಾಗಿ ಹಬ್ಬಿವೆ ಅನ್ನೋ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್‌ಪ್ಯೂಯೆನ್ನಾ ಎ, ಎಚ್‌ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ ಹಬ್ಬಿದೆ .ವೈರಸ್ ವ್ಯಾಪಕವಾಗಿ ಹಬ್ಬಿರುವ ಕಾರಣ, ದೇಶದ ಹಲವು ಭಾಗಗಳಲ್ಲಿ ಆಸ್ಪತ್ರೆಗಳು ಸೋಂಕಿತರಿಂದ ತುಂಬಿ ತುಳುಕುತ್ತಿವೆ. ವೈರಸ್ ಸೋಂಕಿನಿಂದಾಗಿ ಭಾರೀ ಪ್ರಮಾಣದಲ್ಲಿ ಸಾವು ಸಂಭವಿ ಸಿದ್ದು, ಶವಾಗಾರ ಮತ್ತು ಸ್ಮಶಾನಗಳಲ್ಲೂ ಜಾಗ ಇಲ್ಲದಂತಾಗಿದೆ. ಸೋಂಕು ತಡೆಗೆ ಈಗಾಗಲೇ ಚೀನಾ ಸರ್ಕಾರ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದೆ ಎಂಬ ಕುರಿತಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಆದರೆ ಇಂಥ ಸುದ್ದಿಗಳ ಕುರಿತು ಇದುವರೆಗೂ ಚೀನಾ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೊತೆಗೆ ಇದನ್ನು ನಿರಾಕರಿಸಿಯೂ ಇಲ್ಲ. ಈ ಹಿಂದೆ ಕೋವಿಡ್ ಕಾಣಿಸಿಕೊಂಡಾಗಲೂ ಚೀನಾ ಇದೇ ರೀತಿಯಲ್ಲಿ ವರ್ತಿಸಿತ್ತು. ಹೀಗಾಗಿ ಚೀನಾದ ವರ್ತನೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ‘ನ್ಯುಮೋನಿಯಾ ಸೇರಿ ದಂತೆ ಉಸಿರಾಟ ಸಂಬಂಧಿ ಸಮಸ್ಯೆಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಕೊರೋನಾ ಸಂದರ್ಭದಲ್ಲಿ ಉಂಟಾದ ಅವ್ಯವಸ್ಥೆಯ ಪರಿಸ್ಥಿತಿ ಮತ್ತೆ ನಿರ್ಮಾಣವಾಗುವುದನ್ನು ತಡೆಯುವ ಸಲುವಾಗಿ ಸೂಕ್ತ ಮಾರ್ಗಸೂಚಿ ರಚಿಸಲು ಸಿದ್ದತೆ ನಡೆಯುತ್ತಿದೆ. ಇದರ ಭಾಗವಾಗಿ, ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಯೋಗ, ಈ ರೋಗದ ವರದಿ, ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಏಜೆನ್ಸಿ ಸ್ಥಾಪಿಸಲು ಮತ್ತು ಸಿಸಿಟಿವಿ ಅಳವಡಿಸಲು ನಿರ್ಧರಿಸಿದೆ ಎಂದು ‘ ಎಂದು ರಾಯಿಟರ್ಸ್ ಸುದ್ದಿ. ಸಂಸ್ಥೆ ವರದಿ ಮಾಡಿದೆ.

 

- Advertisement -

Latest Posts

Don't Miss