ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿರುವ ಮಾರ್ಕಂಡೇಯ ನದಿ

Chikkodi News: ಚಿಕ್ಕೋಡಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಾರ್ಕಂಡೇಯ ನದಿ ಮೈದುಂಬಿ ಹರಿಯುತ್ತಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಜಲಪಾತದಲ್ಲೂ ಜಲವೈಭವ ಸೃಷ್ಟಿಯಾಗಿದೆ. ಹಾಗಾಗಿ ಫಾಲ್ಸ್ ನೋಡಲು ಜನರ ಈ ಸ್ಥಳಕ್ಕೆ ಬರುತ್ತಿದ್ದಾರೆ. ಹಾಗೆ ಪ್ರವಾಸಕ್ಕೆ ಬರುತ್ತಿರುವವರು, ಸೆಲ್ಫಿಗಾಗಿ ಜನ ಹುಚ್ಚಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಜೀವಕ್ಕೆ ಹಾನಿಯಾಗುತ್ತದೆ.

ಬಂಡೆಗಳ ಮೇಲಿಂದ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು ಜಲಪಾತ ನೋಡಲು ಬರುತ್ತಿದ್ದಾರೆ. ಹೀಗೆ ಬಂದವರು ಅಪಾಯಕಾರಿ ಕಲ್ಲು ಬಂಡೆಗಳ ಮಧ್ಯೆ ಹೋಗಿ ಫೋಟೋ ತೆಗೆದುಕೊಳ್ಳುತ್ತಿದ್ದಾರೆ.

About The Author