- Advertisement -
www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ.
ದೇಶದಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ ಜನರ ಹಿತಾಸಕ್ತಿಗಾಗಿ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಉಭಯ ರಾಷ್ಟ್ರಗಳ ಜವಾಬ್ದಾರಿ ಎಂದು ಕಮಲಾ ಹ್ಯಾರಿಸ್ ಹೇಳಿದ್ದಾರೆ.
26/11 ಮುಂಬೈ ದಾಳಿಯ ಅಪರಾಧಿಗಳಿಗೆ ಉಗ್ರ ಶಿಕ್ಷೆ ನೀಡುವ ಮೂಲಕ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಅಂತ ಉಭಯ ದೇಶಗಳು ಕರೆ ನೀಡಿವೆ. ಇನ್ನು ಜಾಗತಿಕ ಮಟ್ಟದ ಭಯೋತ್ಪಾದನೆ ವಿರುದ್ಧ ಹೋರಾಡಲು ಭಾರತ ಮತ್ತು ಅಮೆರಿಕ ಜಂಟಿಯಾಗಿ ಕೈಜೋಡಿಸಲಿವೆ.
- Advertisement -