Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು ‘Toxic’ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಚಿತ್ರ ತುಂಬಾ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಶ್ ಅವರ ಅಭಿನಯ, ಆ್ಯಕ್ಷನ್ ಹಾಗೂ ಸಿನಿಮಾದ ಅದ್ಧೂರಿತನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು ಸಿನಿಮಾ ನೋಡಿದ ಪ್ರೇಕ್ಷಕರು ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹ ನೀಡಬೇಕು, ಕನ್ನಡ ಚಿತ್ರರಂಗವನ್ನು ಬೆಳೆಸಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ‘Toxic’ ಸಿನಿಮಾ ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದು ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಮೊದಲ ದಿನವೇ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳಿಂದ ಸಿಕ್ಕಿರುವ ಈ ರೀತಿಯ ಪಾಸಿಟಿವ್ ರೆಸ್ಪಾನ್ಸ್ ಚಿತ್ರತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

ಒಟ್ಟಿನಲ್ಲಿ ‘Toxic’ ಸಿನಿಮಾ ಹೇಗಿದೆ ಎಂಬುದನ್ನು ಪ್ರೇಕ್ಷಕರೇ ತಮ್ಮ ಮಾತುಗಳಲ್ಲಿ ಹೇಳಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

About The Author