ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ.
ಮೃತ ಯುವತಿಯನ್ನು ಮೇಘನಾ (24) ಎಂದು ಗುರುತಿಸಲಾಗಿದ್ದು, ಒಂದು ತಿಂಗಳ ಹಿಂದೆ ಮನೆಯಲ್ಲಿ ಮೋಟಾರ್ ಸ್ವಿಚ್ ಆಫ್ ಮಾಡುವ ಸಮಯದಲ್ಲಿ ಆಕೆಗೆ ವಿದ್ಯುತ್ ಸ್ಪರ್ಶಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿದ್ದಳು.
ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಸತತ ಒಂದು ತಿಂಗಳಿನಿಂದ ವೈದ್ಯಕೀಯ ಸಿಬ್ಬಂದಿ ನಡೆಸಿದ ಪ್ರಯತ್ನ ಫಲಕಾರಿಯಾಗದೆ ಮೇಘನಾ ನಿನ್ನೆ ರಾತ್ರಿ ದುರ್ದೈವದಿಂದ ಮೃತಪಟ್ಟಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ಉಪನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವರದಿ : ಲಾವಣ್ಯ ಅನಿಗೋಳ




