ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್, ಆನಂದ್ ಆಡಿಯೋ ಶ್ಯಾಮ್ ಅವರು ಸಹ ಸಮಾರಂಭಕ್ಕೆ ಆಗಮಿಸಿ ಯಶಸ್ಸನ್ನು ಹಾರೈಸಿದರು.
ಈ ಹಿಂದೆ ನಾನು “ಭಾವಚಿತ್ರ” ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಮೂರನೇ ಚಿತ್ರ. ನಿರ್ದೇಶನದೊಂದಿಗೆ ನಟನೆ ಕೂಡ ಮಾಡಿದ್ದೇನೆ. ತಿಲಕ್ ಅವರು “ಗ್ಯಾಂಗ್ ಸ್ಟರ್” ಆಗಿ, ನಾನು “ಫ್ರಾಂಕ್ ಸ್ಟರ್” ಆಗಿ ನಟಿಸಿರುವ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇದು ಯೂಟ್ಯೂಬರ್ ಒಬ್ಬನ ಕಥೆಯಾಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸಚಿವರಿಗೆ ಹಾಗೂ ಗಣ್ಯರಿಗೆ ನನ್ನ ಧನ್ಯವಾದ ಎಂದರು ನಿರ್ದೇಶಕ ಹಾಗೂ ನಟ ಗಿರೀಶ್ ಕುಮಾರ್.
ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಅಜಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.ತಿಲಕ್ , ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಾಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್
Sandalwood: ಸಿನಿಮಾಗಾಗಿ ನಿಜ ಜೀವನದಲ್ಲಿ ಗರ್ಭಿಣಿಯಾದ ನಟಿ ಮಮತಾ ರಾಹುತ್..!




