- Advertisement -
Maharashtra News:
ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ ರೈಲಿನ ಎದುರು ಬಿದ್ದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಆರೋಪಿಯು ದಾದರ್‌ಗೆ ರೈಲು ಹತ್ತಿ ಅಲ್ಲಿಂದ ಕಲ್ಯಾಣ್‌ಗೆ ಹೋಗುತ್ತಿರುವುದು ಬೆಳಕಿಗೆ ಬಂದಿದೆ. ಆತನ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದಂಪತಿಗಳು ಮೊದಲು ಜಗಳವಾಡುತ್ತಿದ್ದರು ಎಂದು ಪೊಲೀಸರ ಮಾಹಿತಿ ಪ್ರಕಾರ ತಿಳಿದು ಬಂದಿದೆ.
ದಾಳಿ ಮರು ಕಳಿಸಲಿದೆ -ಮುಂಬೈ ಪೊಲೀಸರಿಗೆ ಪಾಕ್ ಸಂಖ್ಯೆಯಿಂದ ಬೆದರಿಕೆ ಕರೆ
- Advertisement -