Wednesday, January 22, 2025

Latest Posts

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

- Advertisement -

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಜ್ಯೋತಿ ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ.ಕೊಟ್ರೇಶ್ ಅವರನ್ನು ನೇಮಿಸಿ ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ ಎಂಬ ಆಕ್ಷೇಪ ಕೇಳಿಬಂದಿದೆ.

ಐಎಎಸ್ ಅಥವಾ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ಮಾತ್ರ ಆಡಳಿತದ ಹುದ್ದೆಗಳಿಗೆ ನೇಮಕ ಮಾಡಬೇಕು ಎಂಬ ತಿದ್ದುಪಡಿ ಕಾಯ್ದೆ ಅನ್ವಯ ಎಲ್ಲಾ ವಿವಿಗಳಿಗೆ ಐಎಎಸ್ ಅಥವಾ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಕ ಮಾಡಲಾಗಿತ್ತು.

ಅದರಂತೆ ಬೆಂಗಳೂರು ವಿಶ್ವವಿದ್ಯಾಲಯ ಕುಲಸಚಿವರನ್ನಾಗಿ ಐಎಎಸ್ ಅಧಿಕಾರಿಯಾಗಿದ್ದ ಜ್ಯೋತಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ನ.26ರಂದು ಜ್ಯೋತಿ ಯವರನ್ನು ವರ್ಗಾವಣೆ ಮಾಡಿ ಡಿಪಿಎಆರ್ ಆದೇಶ ಹೊರಡಿಸಿದೆ. ಈಗಾಗಲೇ ಪ್ರೊ. ಕೊಟ್ರೇಶ್ ಅವರು ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನ ಡಿಪಿಎಆರ್ ನೇಮಿಸಿರುವುದಕ್ಕೆ ತೀವ್ರ ಆಕ್ಷೇಪಗಳು ಕೇಳಿ ಬಂದಿವೆ.

ಪ್ರಾಧ್ಯಾಪಕರ ನೇಮಕಾತಿ ಮತ್ತು ವರ್ಗಾವಣೆಯನ್ನು ಉನ್ನತ ಶಿಕ್ಷಣ ಇಲಾಖೆ ಮಾತ್ರ ಕೈಗೊಳ್ಳಬಹುದು. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಕರನ್ನು ನೇಮಕ ಮಾಡಿರುವುದನ್ನು ಕೂಡಲೇ ರದ್ದುಪಡಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಮುಖ್ಯಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಆಡಳಿತದಲ್ಲಿ ಅನುಭವ ಇಲ್ಲದ ವ್ಯಕ್ತಿಯನ್ನು ಈ ಹುದ್ದೆಗೆ ನೇಮಿಸಲಾಗಿದೆ. ಇದು ಸಮಂಜಸವಲ್ಲ ಐಎಎಸ್ ಅಥವಾ ಹಿರಿಯ ಶ್ರೇಣಿ ಕೆಎಎಸ್ ಅಕಾರಿಗಳನ್ನು ಮಾತ್ರ ಆಡಳಿತ ಹುದ್ದೆಗಳಿಗೆ ನೇಮಿಸಬೇಕೆಂಬ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಹೀಗಾಗಿ ಮುಂದೆ ಉನ್ನತ ಶಿಕ್ಷಣ ಇಲಾಖೆಯ ಯಾವುದೇ ನೌಕರ ಅಥವಾ ಅಧಿಕಾರಿಯನ್ನು ವರ್ಗಾವಣೆ ಮಾಡುವಾಗ ಇಲಾಖೆಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

- Advertisement -

Latest Posts

Don't Miss