- Advertisement -
Hubli News: ಹುಬ್ಬಳ್ಳಿ : ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ. ರಾತ್ರೋರಾತ್ರಿ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹಾಗೂ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡಕ್ಕೆ ಮಹಾನಿಂಗ್ ನಂದಗಾವಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
- Advertisement -