Monday, October 27, 2025

Latest Posts

Protest ಹಿಂಪಡೆದ ಕಸದ ಗುತ್ತಿಗೆದಾರರು..!

- Advertisement -

ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಕಸ ಗುತ್ತಿಗೆದಾರರು (Garbage contractors) ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta, Chief Commissioner of BBMP) ತಿಳಿಸಿದ್ದಾರೆ. ಗುತ್ತಿಗೆದಾರರೊಂದಿಗೆ ಸಂಧಾನ ಮಾತುಕತೆ ನಡೆಸಿದ  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಗುತ್ತಿಗೆದಾರರ ಬೇಡಿಕೆ ಈಡೇರಿಸಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ಹಿಂಪಡೆಯುವುದಾಗಿ ಹೇಳಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಯುತ್ತಿತ್ತು. ಬಿಬಿಎಂಪಿಯಲ್ಲಿ ಸರ್ವಾಕಾರಿ ಧೋರಣೆ, ಏಕಚಕ್ರಾಪತ್ಯ ನಡೆಸುತ್ತಿರುವ ಹಣಕಾಸು ವಿಶೇಷ ಆಯುಕ್ತ ತುಳಸಿ ಮದ್ದಿನೇನಿ (Special Commissioner Tulsi Maddineni) ಅವರ ಧೋರಣೆಯಿಂದ ನಮಗೆ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ. ಇದರ ವಿರುದ್ಧ ನಾವು ಅನಿವಾರ್ಯವಾಗಿ ಅನಿರ್ದಿಷ್ಟಾವ ಮುಷ್ಕರ ನಡೆಸುವುದಾಗಿ ತಿಳಿಸಿಸಲಾಗಿತ್ತು. ಬಿಬಿಎಂಪಿ ಅರಣ್ಯ ವಿಭಾಗದ ಗುತ್ತಿಗೆದಾರರ ಸಂಘ, ಡಿಇಒ ಮತ್ತು ಐಟಿ ನೌಕರರ ಸಂಘ, ತೋಟಗಾರಿಕೆ ಇಲಾಖೆಯ ಗುತ್ತಿಗೆದಾರರ ಸಂಘ, ವಿಶೇಷ ಚೇತನರ ಸಂಘ, ಕರ್ನಾಟಕ ಅಂಗವಿಕಲರ ಕ್ರೀಡಾ ಸಂಸ್ಥೆ (Sports of the Karnataka Disabled),ಜಯಕರ್ನಾಟಕ ವಿಕಲಚೇತನ ರಕ್ಷಣಾ ವೇದಿಕೆ ಸೇರಿದಂತೆ ಎಂಟು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ ಎಂದು ಹೇಳಿದರು. ಹಣಕಾಸು ವಿಭಾಗದ ವಿಶೇಷ ಆಯುಕ್ತರ ಪಕ್ಷಪಾತ ಧೋರಣೆಯಿಂದ ನಮಗೆ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ. ಬಾಕಿ ಬಿಲ್ ಬಿಡುಗಡೆಯಾಗುವವರೆಗೆ ನಾವು ಕಸ ವಿಲೇವಾರಿ ಮಾಡದಿರಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು. ಬಿಬಿಎಂಪಿ ಸುಮಾರು 300 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ. ಕಸ ವಿಲೇವಾರಿಗಾಗಿಯೇ ಬಜೆಟ್‍ನಲ್ಲಿ ಹಣ ಇಡಲಾಗಿದ್ದರೂ ಈವರೆಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಹಾಗಾಗಿ ನಾವು ಪ್ರತಿಭಟನೆಯ ಹಾದಿ ಹಿಡಿದಿದ್ದೇವೆ ಎಂದು ಹೇಳಿದರು. ಬಾಕಿ ಬಿಲ್ ಬಿಡುಗಡೆಯಾಗುವವರೆಗೆ ನಾವು ಕಸ ವಿಲೇವಾರಿ ಮಾಡದಿರಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದರು. ಬಿಬಿಎಂಪಿ ಸುಮಾರು 300 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ. ಕಸ ವಿಲೇವಾರಿಗಾಗಿಯೇ ಬಜೆಟ್‍ನಲ್ಲಿ ಹಣ ಇಡಲಾಗಿದ್ದರೂ ಈವರೆಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಈಗಾಗಲೇ ನಾವು ಮೂರು ಬಾರಿ ಮನವಿ ಮಾಡಿದ್ದೇವೆ. ಆದರೆ, ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ಈ ಬಾರಿ ಅನಿರ್ದಿಷ್ಟಾವ ಮುಷ್ಕರದ ಮೂಲಕ ಸರ್ಕಾರಕ್ಕೆ ಬಿಸಿ ತಟ್ಟಿಸಲು ಮುಂದಾಗಿದ್ದೇವೆ. ಯಾರು ಏನೇ ಭರವಸೆ ನೀಡಿದರೂ ಹಣ ಬಿಡುಗಡೆಯಾಗುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಗುತ್ತಿಗೆದಾರರ ಬೇಡಿಕೆ ಈಡೇರಿಸಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ಹಿಂಪಡೆಯುವುದಾಗಿ ಹೇಳಿದ್ದಾರೆ.



- Advertisement -

Latest Posts

Don't Miss