Wednesday, April 16, 2025

Latest Posts

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

- Advertisement -

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಯಾವ ಯಾವ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ತೊಂದರೆಯಾಗಿದೆ ಎಂಬ ಬಗ್ಗೆ ವಿವರಿಸಿದ್ದೇನೆ. ಬೆಳೆ ಹಾನಿ ಕುರಿತಾಗಿಯೂ ಮಾಹಿತಿ ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿದ್ದಾರೆ ಎಂದರು.

ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಅನಾಹುತಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ರಾಜ್ಯಕ್ಕೆ ಅಗತ್ಯವಿರುವ ನೆರವು ನೀಡುವ ಭರವಸೆಯನ್ನು ಪ್ರಧಾನಿ ಮೋದಿ, ಅಮಿತ್ ಶಾ ನೀಡಿದ್ದಾರೆ. ಮಳೆ ಹಾನಿ ಕುರಿತು ಸಂಪೂರ್ಣ ವರದಿಯನ್ನು ಕೇಂದ್ರಕ್ಕೆ ರವಾನಿಸಲಾಗುವುದು ಎಂದರು.

- Advertisement -

Latest Posts

Don't Miss