ನವದೆಹಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ತ್ರಿಪುರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಇಂದು ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದಂತ ಅವರು, ತ್ರಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಮೂಲಕ ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಇರುವಾಗಲೇ, ಕೆಳಗಿಳಿದಿದ್ದಾರೆ.
ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ ಪಕ್ಷವು ಸಂಜೆ 5 ಗಂಟೆಗೆ ಸಭೆ ಸೇರಲಿದೆ.
ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿದೆ.




