Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ.
ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚಿಸಿದ್ದು, ಅದರ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ಆಪ್ತರು, ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದವರನ್ನು ಸೇರಿ, ಹಲವರನ್ನು ವಿಚಾರಣೆಗೆ ಒಳಪಡಿಸಿದೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.
ಸತ್ಯ ಆದಷ್ಟು ಬೇಗ ಹೊರಬರಲಿದೆ.
As I am not in Bangalore to attend the enquiry, I have communicated to C.I.D Bangalore through my Advocate. Truth will prevail soon. pic.twitter.com/lyU7YUoJem
— Prajwal Revanna (@iPrajwalRevanna) May 1, 2024
ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್
ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ: ಸಿಎಂ
ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

