Tumakuru: ಬುಕ್ಕಾಪಟ್ಟಣ ಹೋಬಳಿ: ಮಾದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಘು ಮತ್ತು ಕಾವ್ಯ ದಂಪತಿಗಳ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿಯನು ಅರಿಸುವ ಪ್ರಯತ್ನ ಮಾಡಿದರೂ, ಬೆಂಕಿಯ ಉಗುರುಬೆಳಕಿಗೆ ಗುಡಿಸಲು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಗ್ರಾಮಸ್ಥರು, ಪಂಚಾಯಿತಿ ಸದಸ್ಯರು ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಬೆಂಕಿಯಿಂದಾಗಿ ದಂಪತಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜು ಹೇಳುತ್ತದೆ.




