Tumakuru: ತಿಪಟೂರು. ನಗರಸಭೆ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ ಕೆಲ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗಳ ದರ ಇಳಿಕೆ ಮಾಡಿದ್ದನ್ನು ಸ್ವಾಗತಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.
ಜಿಎಸ್ಟಿ ಇಳಿಕೆಗೆ ಉಡುಗೊರೆ ಮೋದಿ ಸರಕಾರಕ್ಕೆ ಧನ್ಯವಾದಗಳು ಘೋಷ ವಾಕ್ಯದ ಅಡಿಯಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಬಿಜೆಪಿ.ನಗರ ಅಧ್ಯಕ್ಷರಾದ ಜಗದೀಶ್ ಮಾತನಾಡಿ, ಕೇಂದ್ರ ಸರಕಾರ ಜಿಎಸ್ ಟಿ ಇಳಿಕೆ ಮಾಡಿ ಜನರಿಗೆ ನವರಾತ್ರಿ ಉಡುಗೊರೆ ನೀಡಿದೆ. ದೇಶದ ಇತಿಹಾಸದಲ್ಲಿ ಜಿಎಸ್ ಟಿ ಏರಿಸಿದ್ದನ್ನು ಇಷ್ಟು ದೊಡ್ಡ ಮಟ್ಟದಲ್ಲಿ ಇಳಿಸಿದ ಉದಾಹರಣೆ ಇಲ್ಲ. ನರೇಂದ್ರ ಮೋದಿ ಈ ಕೆಲಸ ಮಾಡಿ ಬಡ, ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮುಂಖಡರಾದ ಗಂಗರಾಜು, ಬಿಸಲೇಹಳ್ಳಿ ಜಗದೀಶ್, ಚಿಕಮಾರ್ಪನಹಳ್ಳಿ ಸತೀಶ್ ಬಾಲರಾಜು. ಉಮಾಶಂಕರ್ ಶಶಿಧರ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಹಾಜರಿದ್ದರು.