Tumakuru: ತುಮಕೂರು: ನಾಡಹಬ್ಬ ದಸರಾವನ್ನು ತುಮಕೂರಿನಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದ ಎಂ ಜಿ ಸ್ಟೇಡಿಯಂ ನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆಯುತ್ತಿದ್ದು, ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಕೂಡ ನಡೆಯಿತು.
ಈ ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದು, 260 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಂಜಿನ ಕವಾಯತು ಪ್ರದರ್ಶನ ನೀಡಿದರು. ಇನ್ನು ವಿಶೇಷ ಅಂದ್ರೆ, ಗೃಹಸಚಿವರು ಬೊಂಬೆಹೇಳುತೈತೆ ಹಾಡಿಗೆ ಧ್ವನಿಗೂಡಿಸಿದರು.
ಕಾರ್ಯಕ್ರಮದಲ್ಲಿ ಕನ್ನಿಕಾ ಪರಮೇಶ್ವರ್, ಸರ್ಕಾರದ ದೆಹಲಿ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ಜ್ಯೋತಿಗಣೇಶ್, ಹೆಚ್ ವಿ ವೆಂಕಟೇಶ್, ಐಜಿಪಿ ಲಾಬೂರಾಮ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಓ ಪ್ರಭು ಜಿ, ಪಾಲಿಕೆ ಆಯುಕ್ತೆ ಅಶ್ವಿಜಾ, ಎಸ್ಪಿ ಅಶೋಕ್ ಕೆವಿ ಭಾಗಿಯಾಗಿದ್ದರು.
ಕಾರ್ಯಕ್ರಮ ವೀಕ್ಷಿಸಲು ಮೈದಾನದಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.