Tumakuru: ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ನೆಲ್ಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಡೆಹಳ್ಳಿ ಬುರುಡೆಘಟ್ಟ ಅಕ್ಕ ಪಕ್ಕ ಗ್ರಾಮಗಳಲ್ಲಿ ಚಿರತೆ ಹಾವಳಿ ಜೋರಾಗಿತ್ತು.
ಕೆಲ ದಿನಗಳ ಹಿಂದೆ ಯಡೆಹಳ್ಳಿ ಗ್ರಾಮದ ಭಾರತಮ್ಮ ತೋಟದ ಮನೆಯಲ್ಲಿ ಮೇಕೆಗಳ ಮೇಲೆ ದಾಳಿ ನಡೆಸಿ ರಕ್ತ ಹಿರಿತ್ತು. ಹಾಗಾಗಿ ಇಲ್ಲಿನ ಗ್ರಾಮಸ್ಥರು ಭಯ ಭೀತರಾಗಿ ಜೀವನ ಸಾಗಿಸುತ್ತಿದ್ದರು. ಹಾಗೂ ದನ ಕರುಗಳನ್ನು ಮೇಯಿಸಲು ಹೋಗಿದ್ದ ರೈತರು ಅತಂಕವಾಳಗಿದ್ದರು.
ಚಿರತೆ ಅವಳಿಗೆ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ತಿಳಸಿದ್ದು, ಕೂಡಲೇ ಎಚ್ಛೆತ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಸೋಮವಾರ ಸಂಜೆ ಬೋನ್ ಇರಿಸಿದ್ದಾರೆ. ಸೋಮವಾರ ರಾತ್ರಿ ಸಮಯದಲ್ಲಿ ಚಿರತೆ ಬೋನಿಗೆ ಬಿದ್ದಿದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.



