ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಭಾಗಿಯಾಗಿದ್ದರು. ಸಚಿವ ಹೆಬ್ಬಾರ್ ಅವರು ರಾಜ್ಯದ ಕಾರ್ಮಿಕರ ನೆರವಿಗೆ ಹಲವು ಬೇಡಿಕೆಗನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದರು.
ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಕನಿಷ್ಠ 30 ಹಾಸಿಗೆಗಳ ಇಎಸ್ ಐ ಆಸ್ಪತ್ರೆಗಳನ್ನು ಆರಂಭಿಸಬೇಕು ಹಾಗೂ ಅವುಗಳಲ್ಲಿ ಆಯುಷ್ ವಿಭಾಗ ಇರಬೇಕು ಎಂಬ ಬೇಡಿಕೆಗೆ ಕೇಂದ್ರ ಸಚಿವ ಭೂಪೇಂದ್ರ ಅವರು ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದ ರಾಜ್ಯದ ಸಾಕಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ.
‘ಯದ್ಬವಂ ತದ್ಬವತಿ’ ಚಲನಚಿತ್ರಕ್ಕೆ ಅಮಿತ್ ರಾವ್ ರವರಿಗೆ ಅತ್ಯುತ್ತಮ ನಟ ಪ್ರಶಸ್ತಿ
ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ