Accident News:
ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ ಅವಘಡಗಳು ಸಂಭವಿಸುತ್ತಿವೆ.ಕಳ್ಳಂಬೆಳ್ಳ ಚೆಕ್ಪೋಸ್ಟ್ ಹಾಗೂ ಟೋಲ್ ಬಳಿ ಪದೇಪದೆ ಇಂಥ ಅಪಘಾತಗಳು ಸಂಭವಿಸುತ್ತಿವೆ.
ಕ್ರೂಸರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಾಲಕನು ಮದ್ಯಪಾನ ಸೇವಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!
ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ