www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ.
ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ವರುಣ್ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಕೈಬಿಡಲಾದ ಹಿನ್ನಲೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ.
ಭಾರತದಲ್ಲಿ ಕ್ರಾಂತಿಕಾರಿ ಹೋರಾಟ ನಡೆಸುತ್ತಿದ್ದ ಕಾಲದಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ರೈತರ ಕುರಿತಾಗಿ ಮಾತನಾಡಿರುವ ವಿಡಿಯೋವನ್ನು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ “ರೈತರನ್ನು ಬೆದರಿಸುವ ಸರ್ಕಾರಕ್ಕೆ ಎಚ್ಚರಿಕೆ ನೀಡಿ. ನಮ್ಮನ್ನು ಹೆದರಿಸಲು ಪ್ರಯತ್ನಿಸಬೇಡಿ. ರೈತರು ಹೆದರುವುದಿಲ್ಲ. ನಾವು ರೈತರ ಚಳವಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಬಯಸುವುದಿಲ್ಲ,” ಎಂದು ವಾಜಪೇಯಿ ಹೇಳಿದ್ದಾರೆ. ಅಲ್ಲದೇ “ನಾವು ಅವರ ನಿಜವಾದ ಬೇಡಿಕೆಗಳನ್ನು ಬೆಂಬಲಿಸುತ್ತೇವೆ, ಮತ್ತು ಸರ್ಕಾರವು ನಮ್ಮನ್ನು ಹೆದರಿಸಲು ಅಥವಾ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳಲು ಅಥವಾ ರೈತರ ಶಾಂತಿಯುತ ಹೋರಾಟವನ್ನು ಕಡೆಗಣಿಸಲು ಪ್ರಯತ್ನಿಸಿದರೆ, ನಾವು ಕೂಡ ಚಳುವಳಿಯ ಭಾಗವಾಗುತ್ತೇವೆ” ಎಂದು ವಾಜಪೇಯಿಯವರು ಹೇಳಿದ್ದಾರೆ.
ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಹಿಂಸಾಚಾರಕ್ಕೆ ಸಂಬoಧಿಸಿದoತೆ ರೈತರ ಪರವಾಗಿ ಮಾತನಾಡಿದ ಏಕೈಕ ಬಿಜೆಪಿ ನಾಯಕ ಎಂದರೆ ಅದು ವರುಣ್ ಗಾಂಧಿ. ರೈತರಿಗೆ ಬೆಂಬಲವಾಗಿ ಮಾತನಾಡಿದ್ದು ಅಲ್ಲದೇ, ಮೃತ ರೈತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು. ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಗೆ ವರುಣ್ ಗಾಂಧಿ ಪತ್ರ ಬರೆದಿದ್ದರು.