ಬೆಂಗಳೂರು: ಭಾರತೀಯರ ಕನಸಿನ ಕೂಸಾಗಿದ್ದ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ತಿಳಿಸಲು ಪ್ರಧಾನಿ ಮೋದಿ ಬಂದ ಸಂದರ್ಭದಲ್ಲಿ ನಡೆಸಿದ ರ್ಯಾಲಿಯಲ್ಲಿ ಸಾಕಷ್ಟು ಜನ ಮೋದಿಯನ್ನು ವೀಕ್ಷಿಸಲು ಬಂದಿದ್ದರು.
ಇದೇ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರು ಬ್ಯಾರಿಕೆಡ್ ಒಳಗಿಂದಲೇ ಮೋದಿಯವರ ಗಮನ ಸೆಳೆಯಲು ಹರಸಾಹಸ ಪಟ್ಟರು ಬಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ ಕುಮಾರ್ ಕಟೀಲ್, ಶಾಸಕರಾದ ಆರ್ ಅಶೋಕ್ , ಮುನಿರತ್ನ, ಗೋಪಾಲಯ್ಯ ಸೇರಿದಂತೆ ಹಲವು ಬಿಜೆಪಿ ಶಾಸಕರು ಪ್ರಯತ್ನಿಸುತ್ತಿದ್ದರು.
ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ @BJP4Karnataka ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ!
ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ.
ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ… pic.twitter.com/2fEXz2PvEo
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 26, 2023
ಈ ಸನ್ನಿವೇಶಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.
ರಾಜಕೀಯವಾಗಿ ಮತ್ತು ಸೈದ್ದಾಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ. ಪ್ರಧಾನಿ ಮುಂದೆ ಬ್ಯಾರಿಕೇಡ್ ಬಂಧಿಗಳಾಗಿ ಮೋದಿ ಗಮನ ಸೆಳೆಯಲು ಹರಸಾಹಸ ಪಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವ ಬೀದಿ ಪಾಲು ಮಾಡಿಕೊಂಡಿದ್ದೇ ಕರುಣಾಜನಕವಾಗಿದೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ “ವಿರೋಧ ಪಕ್ಷದ ನಾಯಕ”ನ ಆಯ್ಕೆ ಸಾಧ್ಯವಾಗುವುದೇ?
“ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ”ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ. ಎಂದು ವ್ಯಂಗ್ಯ ಮಾಡಿದ್ದಾರೆ.
Bank check: ದೇವಸ್ಥಾನದ ಹುಂಡಿಯಲ್ಲಿ ನೂರು ಕೋಟಿ ರೂಗಳ ಚೆಕ್. ಬ್ಯಾಂಕ್ ಖಾತೆಯಲ್ಲಿದ್ದ ಹಣವೆಷ್ಟು ಗೊತ್ತಾ?
Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ ಜಿಲ್ಲೆ
Anna Bhagya: ಅಕ್ಕಿ ಕೊರತೆ ನೀಗಿಸಲು ಫಲಾನುಭವಿಗಳ ಖಾತೆಗೆ ಹಣ ಜಮ. ಆದರೆ ಕೆಲವರಿಗೆ ವಂಚನೆ.!