ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ.
ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರನ್ನು ಮುಗಿಸಲು ಅವರ ವಿರುದ್ಧ ಬಸನಗೌಡ ಯತ್ನಾಳ್ ಅವರನ್ನು ಎತ್ತಿ ಕಟ್ಟಿ, ಜೊತೆಗೆ ನಿಮ್ಮ ಪಟ್ಟಾ ಶಿಷ್ಯ ಪ್ರತಾಪ್ ಸಿಂಹ ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ, ವಿಶ್ವೇಶರ್ ಭಟ್‌ರವರು ಹೇಳಿರುವ “ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ” … ಲಿಂಗಾಯತರ ನಂತರ ನಿಮ್ಮ ಗುರಿ ಒಕ್ಕಲಿಗರಾ, ದಲಿತರಾ…??? ಎಂದು ಎಂ.ಬಿ.ಪಾಟೀಲ್, ಟ್ವೀಟ್ ಮೂಲಕ ಪ್ರಶ್ನಿಸಿದ್ದರು.
ಇದಕ್ಕೆ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದ ಯತ್ನಾಳ್ ಎಂ.ಬಿ.ಪಾಟೀಲ್  ರೇ! ನಿಮ್ಮ ಬಗ್ಗೆ ನನಗೆ ಅಯ್ಯೋ ಅನ್ನಿಸುತ್ತಿದೆ. ನಿಮ್ಮಲ್ಲಿ ಇರುವ ರೀತಿ ಎಲ್ಲಾ ಪಕ್ಷದಲ್ಲಿರುತ್ತದೆ ಎಂದು ಭಾವಿಸಬೇಡಿ, ದಲಿತ ನಾಯಕರಾದ ಶ್ರೀ ಡಾ. ಜಿ ಪರಮೇಶ್ವರ್ ಅವರನ್ನು ಮುಗಿಸಲು ಸಿದ್ದರಾಮಯ್ಯನವರು ಯಾರ ಹೆಗಲ ಮೇಲೆ ಇಟ್ಟು ಗುಂಡು ಹೊಡೆದರು? ನಿಮಗೆ “ಭಾರಿ ಸಂಪನ್ಮೂಲ” ಜಲಸಂಪನ್ಮೂಲ ಇಲಾಖೆ ಸಿಗಲಿಲ್ಲ ಅನ್ನುವ ಕಾರಣಕ್ಕೆ ಡಿ.ಕೆ ಶಿವಕುಮಾರ್ ಅವರ ವಿರುದ್ಧ ನಿಮ್ಮ ಹೆಗಲ ಮೇಲೆ ಬಂದೂಕು ಇಟ್ಟಿರುವುದು ಯಾರು? ಹಾ! ಮೊನ್ನೆ ನಿಮ್ಮ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಡಿಕೆಶಿಯವರು ನಿಮಗೆ ಅಲ್ವಾ ,”Dont Disturb” ಅಂದಿದ್ದು, ನಿಮ್ಮಂತಹ ಹಿರಿಯ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಪಕ್ಷ ಹೀಗೆ ನಡೆಸಿಕೊಳ್ಳಬಾರದಿತ್ತು ಬಿಡಿ ಎಂದು ಹೇಳಿದ್ದರು.

ಈಗ ಇದಕ್ಕೆ ಪ್ರತ್ಯುತ್ತರವಾಗಿ ಪಾಟೀಲ್ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ. ಬಸನಗೌಡರವರೆ ನಾನು ಮಾಜಿ ರೈಲ್ವೆ ಮಂತ್ರಿ, ಮುಂದಿನ ಮುಖ್ಯಮಂತ್ರಿ; ನಾನು ವಾಜಪೇಯಿ ಕಾಲದವನು, ಅಡ್ವಾಣಿ ಕಾಲದವನು; ನಾನು ದೊಡ್ಡ ಮಹಾನುಭಾವ ಎಂದೆಲ್ಲಾ ದಿನಕ್ಕೆ ಮೂರು ಬಾರಿ ಮಾಧ್ಯಮಗಳ ಮುಂದೆ ಎಷ್ಟೇ ಬಾಯಿ ಬಡಿದುಕೊಂಡರು ನಿಮಗೆ ಒಂದು ಸಚಿವ ಸ್ಥಾನ ಬಿಡಿ ಒಂದು ನಿಗಮ ಮಂಡಳಿಯ ಅಧ್ಯಕ್ಷತೆಯನ್ನೂ ನೀಡಲಿಲ್ಲ …. ಸ್ವಲ್ಪ ಯೋಚನೆ ಮಾಡಿ ಮಾತನಾಡಿದರೆ ನಿಮ್ಮ ಘನತೆಗೆ ಗೌರವ ಸಿಗಬಹುದೇನೋ… ಎಂದು ತಿರುಗೇಟು ಕೊಟ್ಟಿದ್ದಾರೆ. ಇದೀಗ ಪಾಟೀಲ್ ವರ್ಸಸ್ ಪಾಟೀಲ್ ಆಗಿದ್ದು, ಇವರ ಟ್ವೀಟ್ ಸಮರ ಇಲ್ಲಿಗೆ ಮುಗಿಯುತ್ತದಾ, ಇಲ್ಲವಾ ಅಂತಾ ಕಾದು ನೋಡಬೇಕಿದೆ. 

ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

‘ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣವೇ ನಮ್ಮ ಧ್ಯೇಯ’

ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು, ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

About The Author