ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದರು. ಬಿಜೆಪಿ ಡ್ಯಾಮ್ ಒಡೆದು ಹೋಗಿದೆ. ಒಡೆದ ಡ್ಯಾಮ್ ಹೊಸದಾಗಿ ಕಟ್ಟಲು ಶುರು ಮಾಡಲಿ. ಡ್ಯಾಂ ಒಡೆದು ಹೋದಾಗ ಯಾರೂ ನಿಲ್ಲಿಸಲು ಸಾಧ್ಯವಿಲ್ಲ. ಯಾಕಂದ್ರೆ ಡ್ಯಾಮ್‌ನ ದೊಡ್ಡ ದೊಡ್ಡ ಕಲ್ಲುಗಳು ಕಾಂಗ್ರೆಸ್‌ಗೆ ಬಂದಿದೆ. ಹಳ್ಳಿಗಳಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಕಾಂಗ್ರೆಸ್ ಸಮುದ್ರವಿದ್ದಂತೆ ಎಂದು ಡಿಕೆಶಿ ಹೇಳಿದ್ದರು.
ಅದಕ್ಕೆ ಬೊಮ್ಮಾಯಿ ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ, ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ 2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13 ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
.@DKShivakumar ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ
2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ.
ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ,…— Basavaraj S Bommai (@BSBommai) April 21, 2023
‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’
‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?
ಮತ್ತೆ ಮದುವೆ ಟೀಸರ್ ರಿಲೀಸ್: ನರೇಶ್-ಪವಿತ್ರಾ ಲಾಡ್ಜ್ ದೃಶ್ಯ ರಿಕ್ರಿಯೇಟ್..