Monday, August 4, 2025

Latest Posts

ಇಬ್ಬರು ಅರೆಸ್ಟ್.. ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಕ್ಲಿಯರ್ ಮೆಸೇಜ್!

- Advertisement -

ಸ್ಯಾಂಡಲ್‌ವುಡ್‌ ನಟಿ ರಮ್ಯಾ​ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ.

ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದರು. ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ನಟಿ ರಮ್ಯಾ ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ಒಟ್ಟು 13 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಮ್ಯಾ ದೂರಿನನ್ವಯ ಸಿಸಿಬಿಯವರು ಹಲವರನ್ನ ಗುರುತಿಸಿದ್ದಾರೆ. ಕೆಲವರ ಸ್ಪಷ್ಟ ಮಾಹಿತಿ ಸಿಕ್ಕಿದೆ, ಇಬ್ಬರನ್ನ ಅರೆಸ್ಟ್ ಮಾಡಿದ್ದೇವೆ. ಇನ್ನೂ ಹನ್ನೊಂದು ಜನರ ಮಾಹಿತಿ ಸಿಕ್ಕಿದ್ದು ತನಿಖೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಲಾಗಿದ್ದ ಕಾಮೆಂಟ್‌ಗಳನ್ನೂ ವೆರಿಫೈ ಮಾಡಿದ್ದೇವೆ. 13 ಜನರ ಪೈಕಿ ಇಬ್ಬರನ್ನ ಬಂಧಿಸಿದ್ದೇವೆ. ಬಂಧಿತರು ದರ್ಶನ್‌ ಅಭಿಮಾನಿಗಳೇ‌ ಅಂತ ಪರಿಶೀಲಿಸ್ತಿದ್ದೇವೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಶ್ಲೀಲ ಕಾಮೆಂಟ್ ಮಾಡಿದವರನ್ನ ಅರೆಸ್ಟ್ ಮಾಡಿದವರನ್ನು ಬಂಧಿಸಿದ್ದಕ್ಕೆ ನಟಿ ರಮ್ಯಾ ಅವರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಟಿ ರಮ್ಯಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಪ್ಪು ಮಾಡಿದವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರ ಘನತೆಗೆ ಧಕ್ಕೆ ತಂದವರನ್ನು ಬಂಧಿಸುವ ಕೆಲಸ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಬೆಂಗಳೂರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಬಳಿಕ ಆರೋಪಿಗಳ ಪತ್ತೆಗಿಳಿದ ಪೊಲೀಸರು ಸದ್ಯ 11 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest Posts

Don't Miss