ಸಾರಿಗೆ ಬಸ್ ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿದ್ದ ವೇಳೆ ಬಸ್ ಚಾಲಕ ರೀಲ್ಸ್ ಮಾಡುತ್ತಿದ್ದನು. ಮುಂದೆ ಹೋಗುತ್ತಿದ್ದ ಚಕ್ಕಡಿ ಗಮನಿಸಿದೆ ಚಾಲಕ ಮಾತ್ರ ರೀಲ್ಸ್ ಗುಂಗಿನಲ್ಲಿದ್ದ, ಪರಿಣಾಮ ಹಿಂಬದಿಯಿಂದ ಚಕ್ಕಡಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಎರಡೂ ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ.
Hubli News: ಹುಬ್ಬಳ್ಳಿ: ಸಾರಿಗೆ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ಇಂದು(ಬುಧವಾರ) ನಡೆದಿದೆ. ಘಟನೆಯಲ್ಲಿ ಇಬ್ಬರು ರೈತರಿಗೆ ಗಂಭೀರವಾದ ಗಾಯಗಳಾಗಿವೆ.
ಸಾರಿಗೆ ಬಸ್ ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿದ್ದ ವೇಳೆ ಬಸ್ ಚಾಲಕ ರೀಲ್ಸ್ ಮಾಡುತ್ತಿದ್ದನು. ಮುಂದೆ ಹೋಗುತ್ತಿದ್ದ ಚಕ್ಕಡಿ ಗಮನಿಸಿದೆ ಚಾಲಕ ಮಾತ್ರ ರೀಲ್ಸ್ ಗುಂಗಿನಲ್ಲಿದ್ದ, ಪರಿಣಾಮ ಹಿಂಬದಿಯಿಂದ ಚಕ್ಕಡಿಗೆ ಬಸ್ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿಯಾದ ರಭಸಕ್ಕೆ ಎರಡೂ ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ. ಇಬ್ಬರು ರೈತರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.