- Advertisement -
ಬೆಳಗಾವಿ- ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಯುವಕ ಹಾಗೂ ಬಾಲಕ ಕಾಲು ಜಾರಿ ಬಿದ್ದಿದ್ದಾರೆ. ಇಬ್ಬರಿಗೂ ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇನ್ನು ಯುವಕ ಕಾಂತೇಶ್ ಬಡಿಗೇರ್ (25) ಹಾಗೂ ಬಾಲಕನ ಶವನನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪಿಎಸ್ಐ ದೇವರಾಜ್ ಉಳ್ಳಾಗಡ್ಡಿ ಭೆೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ ಟಿವಿ- ಬೆಳಗಾವಿ
- Advertisement -

