ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್ಗಳನ್ನು ಸಮತಾ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ಸೇವೆಗಾಗಿ ನೀಡಲಾಗಿದೆ. ಕಾರ್ಯಕ್ರಮವು ಮೈಸೂರಿನ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಆಂಬ್ಯುಲೆನ್ಸ್ಗಳನ್ನು ಹಸ್ತಾಂತರ ಮಾಡಲಾಯಿತು. ತುರ್ತು ಸಂದರ್ಭಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ವೇಗವಾದ ವೈದ್ಯಕೀಯ ನೆರವು ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಈ ಆಂಬ್ಯುಲೆನ್ಸ್ಗಳು ಸಾರ್ವಜನಿಕ ಆರೋಗ್ಯ ಸೇವೆಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ತಿಳಿಸಿದ್ದಾರೆ.




