Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು ಇಬ್ಬರು ಜೆಡಿಎಸ್ ಶಾಸಕರು, ಸಿಎಂ ಸಿದ್ದರಾಮಯ್ಯ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ.
ಶ್ರೀನಿವಾಸಪುರದಲ್ಲಿ ವೆಂಕಟಶಿವಾರೆಡ್ಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಶಾಸಕ ರಮೇಶ್ ಕುಮಾರ್ ಒಪ್ಪಿಗೆ ನೀಡಿರುವ ಸಾಧ್ಯತೆ ಇದೆ. ರಮೇಶ್ ಕುಮಾರ್ ಅವರ ಜೊತೆ ಜೆಡಿಎಸ್ ಶಾಸಕರ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಮಾತನಾಡಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆ ಮುಂಚೆಯೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ವೆಂಕಟಶಿವಾರೆಡ್ಡಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ರೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿ ರಮೇಶ್ ಕುಮಾರ್ ಅವರಿಂದ ಸೂಚಕರಾಗಿ ಸಹಿ ಮಾಡಿಸಿ ಅವರನ್ನು ಗೆಲ್ಲಿಸಿಕೊಳ್ಳತ್ತೇವೆ ಎಂದು ಕೋಲಾರದ ಜಿಲ್ಲಾಧಿಕಾರಿ ಕಚೇರಿ ಬಳಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಹೇಳಿದ್ದಾರೆ.
‘ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ’
‘ಪ್ರಜ್ವಲ್ ರೇವಣ್ಣರ ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ’
ಬಾಲಿವುಡ್ ನಟಿ ಇಶಾ ಡಿಯೋಲ್ ದಾಂಪತ್ಯದಲ್ಲಿ ಬಿರುಕು: 12 ವರ್ಷದ ದಾಂಪತ್ಯ ಜೀವನ ಅಂತ್ಯ