ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸ್ತನ ಕ್ಯಾನ್ಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೀಲಾದೇವಿ ಅವರು ಜ್ವರದಿಂದ ಬಳಲುತ್ತಿದ್ದರು. ಹಾಗೆಯೇ, ಅಭಿಲಾಷ್ ಕೂಡ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಇಬ್ಬರ ರಕ್ಷದ ಮಾದರಿ ಪರೀಕ್ಷೆಯಿಂದ ಡಂಗ್ಯೂ ತಗಲಿರುವುದು ದೃಢಪಟ್ಟಿತ್ತು.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದೆ. ಈ ಇಬ್ಬರ ಸಾವಿಗೆ ಕಾರಣ ತಿಳಿಯುವ ಸಲುವಾಗಿ ಶನಿವಾರ ಡೆತ್ ಆಡಿಟ್ ಮಾಡಲಾಗುವುದು. ನಂತರ ಆ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ ಬೆಂಗಳೂರಿನಲ್ಲಿ ಸಂಭವಿಸಿದೆ.