www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ ನೊಂದು ಇಬ್ಬರು ಯುವಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಹಾರಪೂರ ಗ್ರಾಮದ ಬಸವನಗೌಡ (28), ಯಪಲಪರ್ವಿ ಗ್ರಾಮದ ಮಹ್ಮದ್ ರಫಿ (28) ಆತ್ಮಹತ್ಯೆಗೆ ಯತ್ನಿಸಿದವರು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಈ ಇಬ್ಬರು ಯುವಕರನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು