Monday, September 9, 2024

Latest Posts

Raichur : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾ*ವು

- Advertisement -

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ. ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋದಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.ಆಸ್ಪತ್ರೆಯತ್ತ ಮಕ್ಕಳ ಪೋಷಕರು ಆಗಮಿಸುತ್ತಿದ್ದು, ಐಸಿಯುನಲ್ಲಿ ಮಕ್ಕಳನ್ನ ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪೋಷಕರೊಂದಿಗೆ ವಾಗ್ವಾದ ಉಂಟಾಗಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು, ಚಿಕಿತ್ಸೆ ಸ್ಪಂದಿಸುತ್ತಿರುವ ಮಕ್ಕಳಿನ್ನು ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದ್ದು, ಕೆಲವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.

ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಡಿಸಿ ಕೆ.ನಿತೇಶ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಸಮೀಪ ನಡೆದಿದ್ದ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದಿದ್ದಾರೆ.

ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತದಲ್ಲಿ ಸಮರ್ಥ್​​(7), ಶ್ರೀಕಾಂತ್(12) ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

- Advertisement -

Latest Posts

Don't Miss