Tuesday, October 14, 2025

Latest Posts

Doddaballapura : ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು..!

- Advertisement -

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ (Doddaballapura)-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಲ್ಲಿ ರಾಮಯ್ಯನಪಾಳ್ಯ ಗೇಟ್ (Ramayyanapalya Gate) ತಿರುವಿನಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ರಾಮಯ್ಯನಪಾಳ್ಯ ನಿವಾಸಿ ಮುನಿಯಪ್ಪ (muniyappa) (55) ಎಂದು ಗುರ್ತಿಸಲಾಗಿದೆ. ಮೃತನು ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ತನ್ನ ಕುಟುಂಬವನ್ನು ಪೋಷಿಸುತ್ತಿದ್ದ. ರಾಮಯ್ಯನಪಾಳ್ಯದಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಘಟನೆ ನಡೆದಿದೆ. ಈ ಕುರಿತು ಗಂಡರಾಜಪುರದ ಟ್ರಾಕ್ಟರ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest Posts

Don't Miss