Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಣವಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಓಲೈಕೆ ಮಾಡುವ ಭರದಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜದ ಮುಖಂಡರು ಹಾಗೂ ಅಹಿಂದ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ರೀತಿಯಲ್ಲಿ ಮಾತನಾಡುವ ಮೂಲಕ ಕುರುಬ ಸಮಾಜಕ್ಕೆ ಅವಮಾನ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಹಿಂದ ವರ್ಗದ ಅನುದಾನ ಹಾಗೂ ಸಾಮಾಜಿಕ ನ್ಯಾಯದ ವಿಚಾರದಲ್ಲಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಇಡೀ ಸಮುದಾಯದ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಜನರ ಕ್ಷಮೆಯಾಚಿಸಬೇಕು. ಅಲ್ಲದೇ ಈ ಸಂಬಂಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ರಾಜ್ಯಾದ್ಯಂತ ಕುರುಬ ಸಮಾಜ ಹಾಗೂ ಅಹಿಂದ ಸಂಘಟನೆಗಳ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.

About The Author