Udupi News:
ಉಡುಪಿಯ ಹಿರಿಯಡ್ಕ ಮನೆಯಲ್ಲಿ ಚಿರತೆಯೊಂದು ಅಡಗಿಕುಳಿತು ಬೇಟೆಗಾಗಿ ಕಾಯುತ್ತಿತ್ತು. ಇದನ್ನು ಗಮನಿಸಿದ ರಂಜನ್ ಕೆಳ್ಕರ್ ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದರು. ಅಧಿಕಾರಿ ಸುಬ್ರಹ್ಮಣ್ಯ ಆಚರ‍್ಯ ಮರ‍್ಗರ‍್ಶನದಲ್ಲಿ ತಂಡ ಕರ‍್ಯಾಚರಣೆಗೆ ಇಳಿದಿದ್ದು , ಬುಧವಾರ ಹಿಡಿಯಲು ಸಫಲರಾದರು.
ದಿನವಿಡೀ ಕರ‍್ಯಾಚರಣೆ ನಡೆಸುವ ಮೂಲಕ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಮೊದಲು ಎಷ್ಟೇ ಪ್ರಯತ್ನ ಪಟ್ಟರೂ ಮನೆಯೊಳಗೆ ಅವಿತು ಕುಳಿತಿದ್ದ ಚಿರತೆಯನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ದಿನವಿಡೀ ಕಾರ‍್ಯಾಚರಣೆ ನಡೆಸುವ ಮೂಲಕ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಅರವಳಿಕೆ ತಜ್ಞರಾದ ಡಾ. ಮೇಘನಾ ಸ್ಥಳಕ್ಕೆ ಬಂದು ಚಿರತೆಗೆ ಚುಚ್ಚುಮದ್ದು ಹಾಕಲು ನಡೆಸಿದ ಒಂದೆರಡು ಪ್ರಯತ್ನಗಳು ವಿಫಲವಾದವು. ಸಂಜೆಯ ವೇಳೆಗೆ ಕೊನೆಗೂ ಚಿರತೆಗೆ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾದರು. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಹೆಲ್ಮೆಟ್ ಧರಿಸಿ ಮನೆಯೊಳಗೆ ತೆರಳಿ ಮತ್ತೊಮ್ಮೆ ಚುಚ್ಚುಮದ್ದು ಹಾಕಿ ಚಿರತೆಯನ್ನು ಸುರಕ್ಷಿತವಾಗಿ ಮನೆಯಿಂದ ರಕ್ಷಿಸಲಾಗಿದೆ.
ಮೊದಲೇ ಸಿದ್ಧಪಡಿಸಿದ್ದ ಬೋನಿನೊಳಗೆ ಚಿರತೆಯನ್ನು ಹಾಕಿ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು ಮೂರು ವರ್ಷ ಪ್ರಾಯದ ಈ ಗಂಡು ಚಿರತೆಗೆ ಮೈತುಂಬಾ ಗಾಯಗಳಾಗಿವೆ. ಐದಾರು ದಿನಗಳ ಮುಂಚೆ ಈ ಮನೆಯೊಳಗೆ ಚಿರತೆ ನುಗ್ಗಿರುವ ಸಾಧ್ಯತೆ ಇದ್ದು, ಸರಿಯಾದ ಆಹಾರ ಸಿಗದೇ ಕಂಗಾಲಾಗಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಈ ಮನೆಯಲ್ಲಿ ಯಾರು ವಾಸವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!
ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!




