Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರಕರಣದ ಸಮಗ್ರ ತನಿಖೆಗೆ ಹಕ್ಕೊತ್ತಾಯ ಮಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ರಾಜೇಶ್ ನಾಯಕ್, ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್, ಕು. ಭಾಗೀರಥಿ ಮುರುಳ್ಯ, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಉಪಸ್ಥಿತರಿದ್ದರು.
ಜಿಲ್ಲೆ ಮತ್ತು ಮಂಡಲದ ಪದಾಧಿಕಾರಿಗಳು, ಮಾಜಿ ಶಾಸಕರುಗಳು, ಮನಪಾ ಸದಸ್ಯರುಗಳು, ಜನಪ್ರತಿನಿಧಿಗಳು ಹಾಗು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
Surendran : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮ