Udupi News: ಉಡುಪಿ, ನ, 20: ಜಿಲ್ಲಾ ಪ್ರವಾಸ ಕೈಗೊಂಡಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾಗಿ ಸಚಿವ ಸಂತೋಷ್ ಲಾಡ್ ಅವರು, ನೇಜಾರಿನಲ್ಲಿ ಇತ್ತೀಚೆಗೆ ನಡೆದ ನಾಲ್ವರ ಸಾಮೂಹಿಕ ಹತ್ಯೆಯಾದ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಒಂದೇ ಕುಟುಂಬದ ನಾಲ್ವರ ಅಮಾನುಷ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಿ ಮೃತರಿಗೆ ನ್ಯಾಯ ಒದಗಿಸಲು ಕೋರಿ ಕುಟುಂಬದ ಸದಸ್ಯರು ಸಚಿವರಿಗೆ ಈ ವೇಳೆ ಮನವಿ ಮಾಡಿದರು.
ಪ್ರಕರಣ ಸಂಬಂಧ ಈಗಾಗಲೇ ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಂಡಿದೆ. ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿ ಈಗಾಗಲೇ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ನೊಂದ ಕುಟುಂಬಕ್ಕೆ ಶೀಘ್ರ ನ್ಯಾಯ ಸಿಗುವಂತಾಗಲು ಅಗತ್ಯ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ. ಆದ್ದರಿಂದ ಧೈರ್ಯದಿಂದಿರಿ ಎಂದು ಸಚಿವರು ಭರವಸೆ ನೀಡಿದರು.
‘ಪೆನ್’ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’
ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ