Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯ ಬನ್ನಂಜೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು.
ಈ ವೇಳೆ ವಿದ್ಯಾರ್ಥಿನಿಯರ ಜೊತೆ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಕಾಡದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಹಾಸ್ಟೆಲ್‌ನಲ್ಲಿ ತಮ್ಮ ಬೇಡಿಕೆಯನ್ನು ಸಿಎಂ ಮುಂದಿಟ್ಟ ವಿದ್ಯಾರ್ಥಿನಿಯರು. ಪೈನಲ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಅಗತ್ಯ ಇದೆ. ನಮಗೆ ಲ್ಯಾಪ್ ಟ್ಯಾಪ್ ಕೊಡಿ ಅಂತ ಬೇಡಿಕೆ ಇಟ್ಟರು.
Electricity supply : ಉಡುಪಿಯಿಂದ ಕೇರಳಕ್ಕೆ ವಿದ್ಯುತ್ ಪೂರೈಕೆ ಇನ್ನಾ ಗ್ರಾಮದಲ್ಲಿ ಸರ್ವೆಗೆ ತಡೆ
Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ
Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ