ಬೆಂಗಳೂರು: ಇಂದು ಬೆಳಿಗ್ಗೆ 7.00 ಗಂಟೆ ಸುಮಾರಿಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲ್ವೇ ನಿಲ್ದಾಣದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್ ನಿಂದ ಹೊರಟ ರೈಲು ಇಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ತಲುಪಿದೆ. ಪ್ರಯಾಣಿಕರೆಲ್ಲ ಇಳಿದು ಹೋದ ಮೇಲೆ ಸುಮಾರು 7.00 ಸುಮಾರಿಗೆ ಪ್ಲಾಟ್ ಫಾರ್ಮ್ 3 ರಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹತ್ತಿಕೊಂಡಿದೆ.
ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಿಂದ ಇಂಜೀನ್ ನಲ್ಲಿ ದಿಡೀರ್ ಹೊಗೆ ಕಾಣಿಸಿಕೊಂಡಿದೆ. ಸ್ಥಳದಲ್ಲೇ ಇದ್ದ ರೈಲ್ವೇ ಸಿಬ್ಬಂದಿಗಳು ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದಾರೆ. ನಂತರ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ರೈಲ್ವೇ ಇಂಜೀನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ರೈಲಿನಲ್ಲಿ ಪ್ರಯಾಣಿಕರು ಇಲ್ಲದಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Dr G Parameshwar: ಅಮಾಯಕರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸುವಂತೆ ಸಚಿವರಿಗೆ ಮನವಿ:
Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ